ಪೋಷಕರೇ ಎಚ್ಚರ : ಆಟವಾಡುತ್ತಾ ನೀರಿನ ತೊಟ್ಟಿಗೆ ಬಿದ್ದು 3 ವರ್ಷದ ಕಂದಮ್ಮ ಸಾವು

ಶಿರಸಿ : ಆಟವಾಡುತ್ತಾ ಮಗುವೊಂದು ನೀರಿನ ತೊಟ್ಟಿಗೆ ಬಿದ್ದು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಲಕ್ಕೊಳ್ಳಿ ಗ್ರಾಮದಲ್ಲಿ ನಡೆದಿದೆ.

3 ವರ್ಷದ ಮಗು ಮಾನ್ವಿತಾ ಮೃತಪಟ್ಟಿದ್ದು, ತಾಯಿ ಇಟ್ಟಿಗೆ ಭಟ್ಟಿಯಲ್ಲಿ ಕೆಲಸ ಮಾಡುತ್ತಿದ್ದರು. ಆಟವಾಡುತ್ತಾ ಇದ್ದ ಮಗು ಇಟ್ಟಿಗೆ ಭಟ್ಟಿಯ ತೊಟ್ಟಿಗೆ ಬಿದ್ದು ಮೃತಪಟ್ಟಿದೆ ಎಂದು ತಿಳಿದು ಬಂದಿದೆ. ಮಗುವಿಗೆ ಹುಷಾರಿಲ್ಲ ಎಂದು ತಾಯಿ ಕೆಲಸಕ್ಕೆ ಮಗುವನ್ನು ತನ್ನ ಜೊತೆಗೆ ಕರೆದುಕೊಂಡು ಬಂದಿದ್ದಳು.

ಈ ಸಂಬಂಧ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read