ಹೈದರಾಬಾದ್: ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ ಮಾಡಿರುವ ಘೋರ ಘಟನೆ ಆಂಧ್ರಪ್ರದೇಶದ ವೈ ಎಸ್ ಆರ್ ಕಡಪ ಜಿಲ್ಲೆಯಲ್ಲಿ ನಡೆದಿದೆ.
ಪೋಷಕರೊಂದಿಗೆ ಬಾಲಕಿ ಸಂಬಂಧಿಕರ ಮನೆಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ಬಾಲಕಿ ಮನೆಯ ಹೊರಗೆ ಆಟವಾಡುತ್ತಿದ್ದಾಗ ಆಕೆಯನ್ನು ನಂಬಿಸಿ ಕರೆದೊಯ್ದ ದುರುಳ, ಅತ್ಯಾಚಾರವೆಸಗಿ ಬಳಿಕ ಹತ್ಯೆ ಮಾಡಿ ಎಸ್ಕೇಪ್ ಆಗಿದ್ದ.
ಪೋಷಕರು ಬಾಲಕಿ ಕಾಣದಿದ್ದಾಗ ಆತಂಕಗೊಂಡು ಹುಡುಕಾಟ ನಡೆಸಿದಾಗ ಮನೆಯಬಳಿ ಪೊದೆಯಲ್ಲಿ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ. ಪ್ರಕರಣ ಸಂಬಂಧ ರಹಮತ್ ಉಲ್ಲಾ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ತನಿಖೆ ನಡೆಸಿದ್ದಾರೆ.