HomeKarnatakaಮದುವೆ ಊಟ ಸೇವಿಸಿದ್ದ 30ಕ್ಕೂ ಹೆಚ್ಚು ಜನರು ಅಸ್ವಸ್ಥ

ಮದುವೆ ಊಟ ಸೇವಿಸಿದ್ದ 30ಕ್ಕೂ ಹೆಚ್ಚು ಜನರು ಅಸ್ವಸ್ಥ

ಚಿತ್ರದುರ್ಗ: ಮದುವೆ ಊಟ ಸೇವಿಸಿದ್ದ 30ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚಿತ್ರದುರ್ಗ ತಾಲೂಕಿನ ಕಾಲಗೇರೆ ಗ್ರಾಮದಲ್ಲಿ ನಡೆದಿದೆ.

ಕಾಲಗೇರೆಯ ಸಣ್ಣರುದ್ರಪ್ಪ ಎಂಬುವವರ ಮಗಳ ಮದುವೆಗೆಂದು ಹೋಗಿದ್ದ ಗ್ರಾಮಸ್ಥರಿಗೆ ಊಟದ ಬಳಿಕ ಕೆಲ ಸಮಯದಲ್ಲೇ ವಾಂತಿ, ಭೇದಿ ಶುರುವಾಗಿದೆ. ತೀವ್ರ ಅಸ್ವಸ್ಥಗೊಂಡ 30 ಜನರನ್ನು ಭರಮಸಾಗರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಮದುವೆ ಊಟದಲ್ಲಿ ಫುಡ್ ಪಾಯಿಸನ್ ಆಗಿರುವ ಶಂಕೆ ವ್ಯಕ್ತವಾಗಿದೆ. ಭರಮಸಾಗರ ಪೊಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನದೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular