SHOCKING NEWS: ಮಹಾ ಕುಂಭಮೇಳ ಕಾಲ್ತುಳಿತದಲ್ಲಿ ರಾಜ್ಯದ ನಾಲ್ವರು ಸೇರಿ 30 ಜನ ಸಾವು: ಪೊಲೀಸ್ ಇಲಾಖೆ ಅಧಿಕೃತ ಮಾಹಿತಿ

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 30 ಭಕ್ತರು ಮೃತಪಟ್ಟಿದ್ದಾರೆ.

ಪವಿತ್ರ ಸ್ನಾನಕ್ಕೆ ಆಗಮಿಸಿದ್ದವರಲ್ಲಿ ಕಾಲ್ತುಳಿತದಲ್ಲಿ 60 ಭಕ್ತರು ಗಾಯಗೊಂಡಿದ್ದಾರೆ ಎಂದು ಪ್ರಯಾಗ್ ರಾಜ್ ಡಿಐಜಿ ವೈಭವ್ ಕೃಷ್ಣ ತಿಳಿಸಿದ್ದಾರೆ.

ದುರಂತಕ್ಕೆ ಸಂಭವಿಸಿದಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, 25 ಮೃತ ದೇಹಗಳ ಗುರುತು ಪತ್ತೆ ಮಾಡಲಾಗಿದೆ. ಇಂದು ಯಾರಿಗೂ ವಿಐಪಿ ವ್ಯವಸ್ಥೆಯನ್ನು ಮಾಡಿರಲಿಲ್ಲ ಎಂದು ತಿಳಿಸಿದ್ದಾರೆ.

ಕಾಲ್ತುಳಿತದಲ್ಲಿ ಕರ್ನಾಟಕದ ನಾಲ್ವರು ಭಕ್ತರು ಮೃತಪಟ್ಟಿದ್ದಾರೆ. ಗುಜರಾತ್ ರಾಜ್ಯದ ಒಬ್ಬರು, ಆಸ್ಸಾಂನ ಒಬ್ಬರು ಸಾವನ್ನಪ್ಪಿದ್ದಾರೆ. 25 ಜನರ ಗುರುತು ಪತ್ತೆಯಾಗಿದೆ. ಇಂದು ಯಾರಿಗೂ ವಿಐಪಿ, ವಿವಿಐಪಿ ವ್ಯವಸ್ಥೆಯನ್ನು ಮಾಡಿರಲಿಲ್ಲ. ಸಾರ್ವಜನಿಕರು 1920 ಹೆಲ್ಪ್ ಲೈನ್ ನಂಬರ್ ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಹೇಳಿದ್ದಾರೆ.

ಬೆಳಗಿನ ಜಾವ 1-2 ಗಂಟೆಯ ನಡುವೆ ಸಂಭವಿಸಿದ ಮಹಾ ಕುಂಭ ಮೇಳದಲ್ಲಿ 30 ಜನರು ಸಾವನ್ನಪ್ಪಿದ್ದಾರೆ. 25 ಜನರನ್ನು ಗುರುತಿಸಲಾಗಿದ್ದು, ಉಳಿದ 5 ಜನರನ್ನು ಗುರುತಿಸಲಾಗುತ್ತಿದೆ ಎಂದು ಮಹಾಕುಂಭ ಡಿಐಜಿ ವೈಭವ್ ಕೃಷ್ಣ ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read