HomeKarnatakaBREAKING: ಕುರಿ ಮಂದೆ ಮೇಲೆಯೇ ಹರಿದ ಬಸ್: ಚಾಲಕನ ನಿರ್ಲಕ್ಷ್ಯಕ್ಕೆ ಬಲಿಯಾದ 30 ಕುರಿಗಳು

BREAKING: ಕುರಿ ಮಂದೆ ಮೇಲೆಯೇ ಹರಿದ ಬಸ್: ಚಾಲಕನ ನಿರ್ಲಕ್ಷ್ಯಕ್ಕೆ ಬಲಿಯಾದ 30 ಕುರಿಗಳು

ಗದಗ: ಸರ್ಕಾರಿ ಬಸ್ ಹರಿದು 30 ಕುರಿಗಳು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ದಿಂಡೂರು ಸಮೀಪ ನಡೆದಿದೆ.

ಓವರ್ ಟೇಕ್ ಮಾಡಲು ಹೋಗಿ ಸರ್ಕಾರಿ ಬಸ್ ಕುರಿ ಮುಂದೆ ಮೇಲೆ ಹರಿದಿದೆ. ಸರ್ಕಾರಿ ಬಸ್ ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣವೆನ್ನಲಾಗಿದೆ. ಚಾಲಕನ ನಿರ್ಲಕ್ಷ್ಯದಿಂದ 30 ಕುರಿಗಳು ಬಲಿಯಾಗಿವೆ. ಬಾಗಲಕೋಟೆ ಜಿಲ್ಲೆ ಬಾದಾಮಿ ಡಿಪೋಗೆ ಸೇರಿದ ಸರ್ಕಾರಿ ಬಸ್ ಹರಿದು ದುರ್ಘಟನೆ ಸಂಭವಿಸಿದೆ. 4.5 ಲಕ್ಷ ರೂಪಾಯಿ ಮೌಲ್ಯದ ಕುರಿಗಳನ್ನು ಕಳೆದುಕೊಂಡ ಕುರಿಗಾಹಿ ಕಣ್ಣೀರಿಟ್ಟಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular