Mysuru : ಮದುವೆ ಆಗಿಲ್ಲ ಎಂದು ಮನನೊಂದು ಆತ್ಮಹತ್ಯೆಗೆ ಶರಣಾದ 30 ವರ್ಷದ ಯುವಕ

ಮೈಸೂರು : ಮದುವೆ ಆಗಿಲ್ಲ ಎಂದು ಮನನೊಂದು 30 ವರ್ಷದ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸಿದ್ದೇಗೌಡನ ಹುಂಡಿ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಯುವಕನನ್ನು ಮಹದೇವಸ್ವಾಮಿ (30) ಎಂದು ಗುರುತಿಸಲಾಗಿದೆ. ಈತನಿಗೆ ಓರ್ವ ತಂಗಿ ಹಾಗೂ ಅಕ್ಕ ಇದ್ದಾರೆ. ಇಬ್ಬರಿಗೂ ಕೂಡ ಇನ್ನೂ ಮದುವೆ ಆಗಿಲ್ಲ. ಅಕ್ಕ-ತಂಗಿಗೂ ಮದುವೆ ಆಗಿಲ್ಲ, ನನಗೂ ಮದುವೆ ಆಗಿಲ್ಲ ಎಂದು ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿದೆ.

16 ವರ್ಷದ ಬಾಲಕನನ್ನು ಚಾಕುವಿನಿಂದ ಇರಿದು ಕೊಲೆ

ಮೈಸೂರು : ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತ ವಯಸ್ಸಿನ ಬಾಲಕರ ನಡುವೆ ಗಲಾಟೆ ನಡೆದಿದ್ದು, 15 ವರ್ಷದ ಬಾಲಕನೋರ್ವ 16 ವರ್ಷದ ಬಾಲಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಸುನ್ನಿ ಬಳಿ ಈ ಘಟನೆ ನಡೆದಿದ್ದು, ಮಕ್ಕಳ ನಡುವೆ ಗಲಾಟೆ ನಡೆದು ಕ್ಷುಲ್ಲಕ ಕಾರಣಕ್ಕೆ ಫರಾನ್ ಖಾನ್ (16) ಎಂಬಾತನಿಗೆ 15 ವರ್ಷದ ಬಾಲಕ ಚಾಕು ಇರಿದಿದ್ದಾನೆ. ಕೂಡಲೇ ಸ್ಥಳೀಯರು ಬಾಲಕನನ್ನು ಆಸ್ಪತ್ರೆಗೆ ಸಾಗಿಸಿದರೂ ಆತ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.

ಅಪ್ರಾಪ್ತ ವಯಸ್ಸಿನ ಮಕ್ಕಳು ಕೊಲೆ ಮಾಡುವ ಹಂತಕ್ಕೆ ಹೋಗಿದ್ದಾರೆ ಎಂಬುದು ನಿಜಕ್ಕೂ ಆತಂಕಕಾರಿ ವಿಚಾರವಾಗಿದೆ. ಈ ಸಂಬಂಧ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ . ಘಟನೆ ಸಂಬಂಧ ಪೊಲೀಸರು ಬಾಲಕನನ್ನು ವಶಕ್ಕೆ ಪಡೆದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read