HomeKarnatakaBIG NEWS : ರಾಜ್ಯದಲ್ಲಿ 3 ಸಾವಿರ ʻKPSʼ ಶಾಲೆಗಳ ಸ್ಥಾಪನೆ : ಶಿಕ್ಷಣ ಸಚಿವ...

BIG NEWS : ರಾಜ್ಯದಲ್ಲಿ 3 ಸಾವಿರ ʻKPSʼ ಶಾಲೆಗಳ ಸ್ಥಾಪನೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ

ಶಿವಮೊಗ್ಗ : ಮುಂಬರುವ 3 ವರ್ಷಗಳಲ್ಲಿ ರಾಜ್ಯದಲ್ಲಿ 3 ಸಾವಿರ ಕೆಪಿಎಸ್ ಶಾಲೆ ಸ್ಥಾಪಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ದೇಶೀಯ ವಿದ್ಯಾಶಾಲಾ ಸಮಿತಿ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಡಿ.ವಿ.ಎಸ್ ಪ್ರೌಢಶಾಲಾ ಆವರಣದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ 2023-24ರ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಕ್ಕಳಿಗೆ ಗುಣಾತ್ಮಕ ಶಿಕ್ಷಣ, ಪೌಷ್ಟಿಕ ಆಹಾರ ಮತ್ತು ಅವರಲ್ಲಿರುವ ಪ್ರತಿಭೆಯನ್ನು ಗುರುತಿಸಿ ಬೆಳೆಸುವ ಕೆಲಸವನ್ನು ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚವರಾದ ಎಸ್.ಮಧು ಬಂಗಾರಪ್ಪ ನುಡಿದರು.

ಮಕ್ಕಳಲ್ಲಿರುವ ಪ್ರತಿಭೆ ದೇಶದ ಆಸ್ತಿ. ಅದನ್ನು ಉಳಿಸಿ ಬೆಳೆಸುವ ಕೆಲಸವನ್ನು ಮಾಡಲಾಗುವುದು, ಗುಣಮಟ್ಟದ ಶಿಕ್ಷಣದೊಂದಿಗೆ ಮಕ್ಕಳಲ್ಲಿರುವ ಪ್ರತಿಭೆ, ಕಲೆ, ಕ್ರೀಡೆಗಳಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದರು.

ನನ್ನ ಇಲಾಖಾ ವ್ಯಾಪ್ತಿಯಡಿ ಸರ್ಕಾರಿ, ಅನುದಾನಿತ ಸೇರಿ ಒಟ್ಟು 58 ಸಾವಿರ ಶಾಲೆಗಳು, ಅನುದಾನರಹಿತ ಸೇರಿದಂತೆ ಒಟ್ಟು 76 ಸಾವಿರ ಶಾಲೆಗಳಿದ್ದು 1 ಕೋಟಿ 2 ಲಕ್ಷ ಮಕ್ಕಳಿದ್ದಾರೆ. ವಿದ್ಯೆ ಒಂದು ಉತ್ತಮ ಸಂಪನ್ಮೂಲವಾಗಿದ್ದು ವಿದ್ಯಾದಾನ ದೇವರ ಕೆಲಸವಿದ್ದಂತೆ. ಇಂತಹ ಇಲಾಖೆಯಲ್ಲಿ ಹಲವಾರು ಸಮಸ್ಯೆಗಳಿವೆ. ಆದರೆ ಹಂತ ಹಂತವಾಗಿ ಅವುಗಳಿಗೆ ಪರಿಹಾರೋಪಾಯ ಕಂಡುಕೊಳ್ಳಲಾಗುವುದು ಎಂದರು.

 53 ಸಾವಿರ ಶಿಕ್ಷಕರ ಕೊರತೆ ಇತ್ತು. ಇದರಲ್ಲಿ 13 ಸಾವಿರ ಶಿಕ್ಷಕರ ನೇಮಕ ಮಾಡಲಾಗಿದೆ. 4 ರಿಂದ 5 ಸಾವಿರ ದೈಹಿಕ ಶಿಕ್ಷಕರ ಕೊರತೆ ಇದೆ. ದೈಹಿಕ ಶಿಕ್ಷಕರು, ಕಲೆ, ಸಂಗೀತ ಶಿಕ್ಷಕರ ಕೊರತೆಯನ್ನು ಹಂತ ಹಂತವಾಗಿ ನೀಗಿಸಲಾಗುವುದು.

3 ಸಾವಿರ ಕೆಪಿಎಸ್ ಶಾಲೆ ಸ್ಥಾಪನೆ: ಮುಂಬರುವ 3 ವರ್ಷಗಳಲ್ಲಿ ರಾಜ್ಯದಲ್ಲಿ 3 ಸಾವಿರ ಕೆಪಿಎಸ್ ಶಾಲೆ ಸ್ಥಾಪಿಸಲಾಗುವುದು. ಎಲ್‍ಕಿಜಿ ಯಿಂದು ಹಿಡಿದು 2 ನೇ ಪಿಯುಸಿ ವರೆಗೆ ಕಲೆ, ಸಂಗೀತ, ಕ್ರೀಡೆ ಇತರೆ ಚಟುವಟಿಕೆಗಳನ್ನೊಳಗೊಂಡ ಗುಣಮಟ್ಟದ ಶಿಕ್ಷಣ ಇಲ್ಲಿ ಲಭಿಸಲಿದೆ. ಮುಂದಿನ ವರ್ಷ 500 ಶಾಲೆಗಳನ್ನು ಕೆಪಿಎಸ್ ಶಾಲೆಗಳಾಗಿ ಉನ್ನತೀಕರಿಸಲಾಗುವುದು. ಪ್ರತಿ ಶಾಸಕರ ಕ್ಷೇತ್ರದಲ್ಲಿ 4 ರಿಂದ 6 ಶಾಲೆಗಳು ಉನ್ನತೀರಕರಣಗೊಳ್ಳಲಿವೆ.

ಪೌಷ್ಟಿಕತೆಯೆಡೆ ಹೆಜ್ಜೆ :   ಸರ್ಕಾರ ಮಕ್ಕಳ ಪೌಷ್ಟಿಕತೆ ಹೆಚ್ಚಿಸಲು ಉತ್ತಮ ಹೆಜ್ಜೆ ಇಟ್ಟಿದ್ದು ಮೊದಲು 8ನೇ ತರಗತಿವರೆಗೆ ಇದ್ದ ಮೊಟ್ಟೆ ವಿತರಣೆಯನ್ನು ಇದೀಗ 10 ನೇ ತರಗತಿವರೆಗೆ ವಿಸ್ತರಿಸಿ ವಾರದಲ್ಲಿ 2 ದಿನ ಮೊಟ್ಟೆಯನ್ನು ನೀಡಲಾಗುತ್ತಿದೆ. ಕ್ಷೀರ ಭಾಗ್ಯ ಯೋಜನೆಯೊಂದಿಗೆ ಶೀಘ್ರದಲ್ಲೇ ಸಿಫ್‍ಆರ್‍ಟಿ ದೃಡೀಕರಣ ದೊರತ ತಕ್ಷಣ 60 ಲಕ್ಷ ಮಕ್ಕಳಿಗೆ ರಾಗಿ ಮಾಲ್ಟ್ ನೀಡಲಾಗುವುದು.

 ಮಕ್ಕಳ ಶೈಕ್ಷಣಿಕ ಬೆಳವಣಿಗೆ ಉದ್ದೇಶದಿಂದ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ 3 ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಅನುದಾನಿತ ಶಾಲೆಗಳು ಸಹ ಸರ್ಕಾರದ ಅಂಗವಾಗಿದ್ದು, 2020 ರವರೆಗೆ ಖಾಲಿ ಇರುವ ಶಿಕ್ಷಕರನ್ನು ತುಂಬಲು ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು. ಹಂತ ಹಂತವಾಗಿ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವುದು ಸೇರಿದಂತೆ ಎಲ್ಲ ರೀತಿಯ ಸಮಸ್ಯೆಗಳನ್ನು ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular