HomeKarnataka31 ಕೈದಿಗಳಿಗೆ ನಾಳೆ ಬಿಡುಗಡೆ ಭಾಗ್ಯ

31 ಕೈದಿಗಳಿಗೆ ನಾಳೆ ಬಿಡುಗಡೆ ಭಾಗ್ಯ

ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರುಯಾಗಿ ರಾಜ್ಯದ ವಿವಿಧ ಜಿಲ್ಲೆಗಳ ಕಾರಾಗೃಹದಲ್ಲಿರುವ 31 ಕೈದಿಗಳಿಗೆ ನಾಳೆ ಮಾರ್ಚ್ 13ರಂದು ಬಿಡುಗಡೆ ಭಾಗ್ಯ ಸಿಗಲಿದೆ.

ಸನ್ನಡತೆಯ ಆಧಾರದಲ್ಲಿ ನಾಳೆ 31 ಕೈದಿಗಳನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಲಿದೆ. ಜೈಲಿನಲ್ಲಿ ಉತ್ತಮ ನಡವಳಿಕೆ ತೋರಿದ ಕೈದಿಗಳನ್ನು ಸಮಾಜದ ಮುಖ್ಯವಾಹಿನಿಗೆ ತಂದು, ಪುನಃ ಅವರು ಹೊಸ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಿಕೊಡುವ ಮಾನವೀಯ ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಸರ್ಕಾರದ ಆದೇಶಾನುಸಾರ ರಾಜ್ಯದ ವಿವಿಧ ಕಾರಾಗೃಹಗಳಲ್ಲಿರುವ 30 ಜನ ಕೈದಿಗಳು ಮಾರ್ಚ್ 13ರಂದು ಬಿಡುಗಡೆಯಾಗಲಿದ್ದಾರೆ. ಕೇಂದ್ರ ಗೃಹ ಸಚಿವಾಲಯದ ಸಹಮತಿ ಹಾಗೂ ರಾಜ್ಯಪಾಲರ ಅನುಮೋದನೆ ದೊರೆತ‌ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಕಾರಾಗೃಹಗಳಲ್ಲಿರುವ 27 ಜನ ಪುರುಷ ಹಾಗೂ ಮೂವರು ಮಹಿಳಾ ಕೈದಿಗಳಿಗೆ ನಾಳೆ ಬಿಡುಗಡೆಯ ಭಾಗ್ಯ ದೊರೆಯಲಿದೆ. ಓರ್ವ‌ ಮಹಿಳಾ ಕೈದಿಯು ಈಗಾಗಲೆ ಪೆರೋಲ್ ರಜೆಯಲ್ಲಿದ್ದಾರೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆ ಮಹಾನಿರ್ದೇಶಕರು ಸಲ್ಲಿಸಿದ್ದ ಪ್ರಸ್ತಾವನೆಯನ್ನ ಆಧರಿಸಿ, ರಾಜ್ಯ ಸರ್ಕಾರದ ಒಳಾಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಒಟ್ಟು 54 ಜೀವಾವಧಿ ಶಿಕ್ಷೆ ಕೈದಿಗಳ ಪ್ರಕರಣಗಳನ್ನು ಕೂಲಂಕಷವಾಗಿ ಚರ್ಚಿಸಲಾಗಿತ್ತು. ಸಮಿತಿಯು ಪರಿಶೀಲಿಸಿದ 54 ಪ್ರಕರಣಗಳ ಪೈಕಿ 31 ಕೈದಿಗಳ ಬಿಡುಗಡೆಗೆ ಶಿಫಾರಸ್ಸು ಮಾಡಲಾಗಿದೆ. ಉಳಿದ 21 ಕೈದಿಗಳ ಬಿಡುಗಡೆ ಅರ್ಜಿಯನ್ನ ತಿರಸ್ಕರಿಸಲಾಗಿದೆ.

2 ಪ್ರಕರಣಗಳಲ್ಲಿ ಕೇಂದ್ರ ಗೃಹ ಸಚಿವಾಲಯದ ಅನುಮೋದನೆ ಪಡೆಯುವುದು ಬಾಕಿಯಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಬಿಡುಗಡೆಯಾಗುತ್ತಿರುವ ಜಿಲ್ಲಾವಾರು ಕೈದಿಗಳ ಬಗ್ಗೆ ಗಮಿನುಸುವುದಾದರೆ- ಬೆಂಗಳೂರು – 14, ವಿಜಯಪುರ – 5, ಬಳ್ಳಾರಿ – 3, ಮೈಸೂರು – 2, ಬೆಳಗಾವಿ – 2, ಕಲಬುರಗಿ – 2, ಶಿವಮೊಗ್ಗ – 1 ಶಿವಮೊಗ್ಗ (ಮಹಿಳಾ) – 1, ಧಾರವಾಡ – 1 ಕೈದಿಗಳು ಬಿಡುಗಡೆಯಾಗಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular