HomeJobs313 ಪ್ರಿನ್ಸಿಪಾಲ್‌ಗಳ ಆಯ್ಕೆ ಪಟ್ಟಿ: ಸರ್ಕಾರದಿಂದ ಬಿಗ್ ಅಪ್‌ಡೇಟ್

313 ಪ್ರಿನ್ಸಿಪಾಲ್‌ಗಳ ಆಯ್ಕೆ ಪಟ್ಟಿ: ಸರ್ಕಾರದಿಂದ ಬಿಗ್ ಅಪ್‌ಡೇಟ್

ಕಲ್ಯಾಣ ಕರ್ನಾಟಕ ಭಾಗದಲ್ಲಿ ಸ್ಥಳೀಯ ವೃಂದ ಮತ್ತು ಉಳಿಕೆ ಮೂಲ ವೃಂದದಲ್ಲಿನ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಸಂದರ್ಭದಲ್ಲಿ ವಿವಿಧ ನೇಮಕಾತಿ ಪ್ರಾಧಿಕಾರಗಳು ಅನುಸರಿಸಬೇಕಾದ ಕ್ರಮಗಳ ಬಗ್ಗೆ 371 (ಜೆ) ಅಡಿ ಹೊರಡಿಸಲಾಗಿರುವ ಆದೇಶಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಮತ್ತು ಪರಾಮರ್ಶೆ ಕುರಿತ ಸಂಪುಟ ಉಪ ಸಮಿತಿ ಅಧ್ಯಕ್ಷ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ ನಡೆಸಿತು.

ಉನ್ನತ ಶಿಕ್ಷಣ ಇಲಾಖೆ ಮೂಲಕ ಪ್ರಥಮ ದರ್ಜೆ ಕಾಲೇಜುಗಳ 310 ಹುದ್ದೆಗಳ ಆಯ್ಕೆ ಇತ್ತೀಚೆಗೆ ನಡೆದಿದ್ದು, ಆಯ್ಕೆ ಪ್ರಕ್ರಿಯೆಯಲ್ಲಿ ಲೋಪವಾಗಿದೆ ಎಂದು ಕೆಲವು ಅಭ್ಯರ್ಥಿಗಳು ಉಪಸಮಿತಿಯ ಅಧ್ಯಕ್ಷರಾದ ಪ್ರಿಯಾಂಕ್‌ ಖರ್ಗೆ ಅವರಿಗೆ ದೂರು ನೀಡಿದ್ದು, ಈ ಸಂಬಂಧದಲ್ಲಿ ಇಂದು ಸಚಿವ ಸಂಪುಟದ ಉಪ ಸಮಿತಿ ಸಭೆಯನ್ನು ನಡೆಸಲಾಯಿತು.

ಸಭೆಯಲ್ಲಿ ಸಚಿವ ಸಂಪುಟ ಉಪ ಸಮಿತಿಯ ಸದಸ್ಯರಾದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌, ಭಾಗವಹಿಸಿ ಹಲವಾರು ಸಲಹೆ ಸೂಚನೆಗಳನ್ನು ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉನ್ನತ ಶಿಕ್ಷಣ ಇಲಾಖೆ ಮೂಲಕ ಪ್ರಥಮ ದರ್ಜೆ ಕಾಲೇಜುಗಳ 310 ಹುದ್ದೆಗಳ ಆಯ್ಕೆ ಇತ್ತೀಚೆಗೆ ನಡೆದಿದ್ದು, ಆಯ್ಕೆ ಪ್ರಕ್ರಿಯೆಯಲ್ಲಿ ಡಿಪಿಎಆರ್‌ ನೀಡಿರುವ ಸ್ಪಷ್ಟ ನಿರ್ದೇಶನಗಳನ್ನು ಪಾಲಿಸುವಲ್ಲಿ ಲೋಪವಾಗಿದೆ ಎಂಬುದನ್ನು ಮನಗಂಡ ಆಯ್ಕೆ ಸಮಿತಿ ಆಯ್ಕೆ ಪಟ್ಟಿಯನ್ನು ಮರು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಿತು.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹೊರಡಿಸಿರುವ ಸುತ್ತೋಲೆಗಳನ್ನು ಕಡ್ಡಾಯವಾಗಿ ಪಾಲಿಸಲು ಅಧಿಕಾರಿಗಳಿಗೆ ಸೂಚಿಸಿದ ಸಮಿತಿಯು  ತಪ್ಪಿದಲ್ಲಿ ಸಂಬಂಧಪಟ್ಟ ನೇಮಕಾತಿ ಪ್ರಾಧಿಕಾರಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂಬ ಎಚ್ಚರಿಕೆಯನ್ನು ನೀಡಿತು.

ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಖುಷ್ಬು ಚೌಧರಿ, ಡಿಪಿಎಆರ್‌ ಪ್ರಧಾನ ಕಾರ್ಯದರ್ಶಿ ಕೆ.ಜಿ.ಜಗದೀಶ್‌, ಉನ್ನತ ಶಿಕ್ಷಣ ಇಲಾಖೆಯ ಆಯುಕ್ತೆ ಮಂಜುಶ್ರೀ ಭಾಗವಹಿಸಿದ್ದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular