ನವದೆಹಲಿ: ಭಾರತ-ಪಾಕಿಸ್ತಾನದ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿದ್ದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ತಾತ್ಕಾಲಿಕವಾಗಿ ಬಂದ್ ಆಗಿದ್ದ ಭಾರತದ 32 ವಿಮಾನ ನಿಲ್ದಾಣಗಳು ಪುನರಾರಂಭವಾಗಿವೆ.
ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ 32 ಏರ್ ಪೋರ್ಟ್ ಗಳು ಇಂದಿನಿಂದ ಪುನರಾರಂಭಗೊಂಡಿವೆ. ವಿಮಾನ ಸೇವೆ ಲಭ್ಯವಿರಲಿದೆ ಎಂದು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ತಿಳಿಸಿದೆ.
ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ಸ್ಥಿತಿ ಹಿನ್ನೆಲೆಯಲ್ಲಿ ಮೇ 9ರಿಂದ ಮೇ 15ರವರ ಬೆಳಿಗ್ಗೆ 5:30ರವರೆಗೆ 32 ಏರ್ ಪೋರ್ಟ್ ಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿತ್ತು. ಇದೀಗ ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ 32 ಏರ್ ಪೋರ್ಟ್ ಗಳು ನಾಗರಿಕ ವಿಮಾನ ಕಾರ್ಯಾಚರಣೆಗಳಿಗೆ ತಕ್ಷಣದಿಂದ ಲಭ್ಯವಿರಲಿದೆ. ಪ್ರಯಾಣಿಕರು ತಮ್ಮ ವಿಮಾನಗಳ ಸ್ಥಿತಿಗತಿಗಳನ್ನು ನೇರವಾಗಿ ಏರ್ ಲೈನ್ಸ್ ಸಂಸ್ಥೆಗಳೊಂದಿಗೆ ಸಂಪರ್ಕಿಸಿ ಪರಿಶೀಲಿಸಬಹುದು ಎಂದು ಏರ್ ಪೋರ್ಟ್ ಅಥಾರಿಟಿ ಪ್ರಕಟಣೆ ಹೊರಡಿಸಿದೆ.