ಬೆಂಗಳೂರು : ರಾಜ್ಯದಲ್ಲಿ ಶೀಘ್ರವೇ 32 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜ್ಯದಲ್ಲಿ 51 ಸಾವಿರ ಶಿಕ್ಷಕರ ಕೊರತೆ ಇದೆ, ಸದ್ಯ 13 ಸಾವಿರ ಶಿಕ್ಷಕರ ನೇಮಕಾತಿ ಆಗಿದೆ. ಶೀಘ್ರವೇ 32 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
1 ನೇ ತರಗತಿ ಮಕ್ಕಳಿಗೆ ಗಣಕ ಯಂತ್ರ ತರಬೇತಿ ನೀಡಲಿದ್ದೇವೆ . ವಿಶೇಷವಾಗಿ ಗ್ರಾಮೀಣ ಭಾಗದ ಮಕ್ಕಳಿಗೆ ಇದರಿಂದ ಸಹಾಯ ಆಗಬೇಕು ಎಂದರು. ಸರ್ಕಾರಿ ಶಾಲೆಗಳಲ್ಲಿ ಉಚಿತ ವಿದ್ಯುತ್ ನೀಡುತ್ತಿದ್ದೇವೆ ಎಂದು ಅವರು ಹೇಳಿದರು.
