SHOCKING : ಈ ವರ್ಷ ರಾಜ್ಯದಲ್ಲಿ 327 ಬಾಣಂತಿಯರು ಸಾವು ; ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಬೆಂಗಳೂರು :  ರಾಜ್ಯದಲ್ಲಿ ಈ ವರ್ಷ  ರಾಜ್ಯದಲ್ಲಿ 327 ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ ಬಿಚ್ಚಿಟ್ಟಿದ್ದಾರೆ.ರಾಜ್ಯದಲ್ಲಿ ಈ ವರ್ಷ 327 ಮಹಿಳೆಯರು ಮೃತ ಪಟ್ಟಿದ್ದಾರೆ. ಈ ಸಂಬಂಧ ಈಗಾಗಲೇ ಶಿಸ್ತುಕ್ರಮ ಜರುಗಿಸಿ, ನೋಟೀಸ್ ಜಾರಿ ಮಾಡಲಾಗಿದೆ ಎಂದರು.

ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

2024-25ನೇ ಸಾಲಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ಎನ್‌ಎಫ್‌ಡಿಎಸ್ ಕಾರ್ಯಕ್ರಮದ ಅಡಿಯಲ್ಲಿ19.70 ಕೋಟಿ ವೆಚ್ಚದಲ್ಲಿ ಆರೋಗ್ಯ ಪ್ರಯೋಗಶಾಲೆಗಳ ಪರಿಕರಗಳ ಖರೀದಿಗೆ ಅನುಮೋದನೆ. •ರಾಜ್ಯದ ಆಹಾರಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಹಾಗೂ ಔಷಧ ನಿಯಂತ್ರಣ ಇಲಾಖೆಗಳನ್ನು ವಿಲೀನಗೊಳಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಎರಡು ಇಲಾಖೆಗಳನ್ನು ವಿಲೀನಗೊಳಿಸಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (FDA) ಎಂದು ಕರೆಯಲಾಗುವುದು. •ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳ ಅಪರೂಪದ ಮತ್ತು ಹೆಚ್ಚಿನ ವೆಚ್ಚದ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು 47 ಕೋಟಿ ರೂಪಾಯಿ ವೆಚ್ಚದಲ್ಲಿ ಕಾರ್ಪಸ್ ನಿಧಿ ಸ್ಥಾಪನೆ. •ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ಮಂಗಳೂರು-ಚೆರ್ವತ್ತೂರು ಕರಾವಳಿ ಜಿಲ್ಲಾ ಮುಖ್ಯ ರಸ್ತೆಯ (ಕೋಟೆಪುರದಿಂದ – ಬೋಳಾವರೆಗೆ) ನೇತ್ರಾವತಿ ನದಿಗೆ ಅಡ್ಡಲಾಗಿ 200 ಕೋಟಿ ರೂಪಾಯಿ ವೆಚ್ಚದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಅನುಮೋದನೆ. •ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಸಜಪನಡು ಮತ್ತು ತುಂಬೆ ಗ್ರಾಮದ ಮಧ್ಯೆ ನೇತ್ರಾವತಿ ನದಿಗೆ ಅಡ್ಡಲಾಗಿ 60 ಕೋಟಿ ರೂಪಾಯಿ ವೆಚ್ಚದಲ್ಲಿ ಸೇತುವೆ ನಿರ್ಮಾಣಕ್ಕೆ ಒಪ್ಪಿಗೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read