HomeKarnatakaBIG NEWS: ಲೋಕ ಅದಾಲತ್ ನಲ್ಲಿ 35.84 ಲಕ್ಷ ಕೇಸ್ ಇತ್ಯರ್ಥ: ಅಪಘಾತ ಪ್ರಕರಣವೊಂದರಲ್ಲಿ 3.75...

BIG NEWS: ಲೋಕ ಅದಾಲತ್ ನಲ್ಲಿ 35.84 ಲಕ್ಷ ಕೇಸ್ ಇತ್ಯರ್ಥ: ಅಪಘಾತ ಪ್ರಕರಣವೊಂದರಲ್ಲಿ 3.75 ಕೋಟಿ ರೂ. ಪರಿಹಾರ

ಬೆಂಗಳೂರು: ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ 35.84 ಲಕ್ಷ ಕೇಸ್ ಗಳನ್ನು ಇತ್ಯರ್ಥಪಡಿಸಲಾಗಿದೆ. ಸೆಪ್ಟೆಂಬರ್ 14ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಸಲಾಗಿತ್ತು ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಾಗಿದೆ.

ನ್ಯಾಯಮೂರ್ತಿಗಳಾದ ವಿ. ಕಾಮೇಶ್ವರ ರಾವ್, ಶ್ರೀನಿವಾಸ್ ಹರೀಶ್ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ನ್ಯಾಯಾಲಯಗಳಲ್ಲಿ ಬಾಕಿ ಇದ್ದ ಎರಡು ಲಕ್ಷ ಕೇಸ್ ಗಳನ್ನು ಇತ್ಯರ್ಥಪಡಿಸಲಾಗಿದೆ.

33.84 ಲಕ್ಷ ವ್ಯಾಜ್ಯ ಪೂರ್ವ ಪ್ರಕರಣಗಳು ಇತ್ಯರ್ಥಗೊಂಡಿದ್ದು, 2402 ಕೋಟಿ ಪರಿಹಾರ ಮೊತ್ತದೊಂದಿಗೆ ಕೇಸುಗಳ ಇತ್ಯರ್ಥ ಪಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

1669 ವೈವಾಹಿಕ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ.

ಸಂಧಾನದ ಮೂಲಕ 248 ದಂಪತಿಯನ್ನು ಒಟ್ಟುಗೂಡಿಸಲಾಗಿದೆ.

2696 ವಿಭಾಗ ದಾವೆಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ.

3621 ಅಪಘಾತ ಪ್ರಕರಣಗಳಲ್ಲಿ 191 ಕೋಟಿ ಪರಿಹಾರ ನೀಡಲಾಗಿದೆ.

8517 ಚೆಕ್ ಬೌನ್ಸ್ ಕೇಸುಗಳನ್ನು ಮುಕ್ತಾಯಗೊಳಿಸಲಾಗಿದೆ.

2598 ಅಮಲ್ದಾರಿ ಪ್ರಕರಣಗಳು, 703 ಗ್ರಾಹಕರ ವ್ಯಾಜ್ಯಗಳು ಇತ್ಯರ್ಥವಾಗಿವೆ.

ಅಪಘಾತ ಪ್ರಕರಣವೊಂದರಲ್ಲಿ 3.75 ಕೋಟಿ ಪರಿಹಾರ ನೀಡಲು ಆದೇಶಿಸಲಾಗಿದೆ.

5 ವರ್ಷಕ್ಕೂ ಹಳೆಯದಾದ 1443 ಕೇಸ್ ಗಳನ್ನು ಇತ್ಯರ್ಥಪಡಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular