HomeKarnatakaBIG NEWS: ಬೆಂಗಳೂರಿನಲ್ಲಿ 35 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ; 8 ಆರೋಪಿಗಳು ಅರೆಸ್ಟ್

BIG NEWS: ಬೆಂಗಳೂರಿನಲ್ಲಿ 35 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ; 8 ಆರೋಪಿಗಳು ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಹೆಬ್ಬಾಳ ಠಾಣೆ ಪೊಲೀಸರು ಅಂತಾರಾಜ್ಯ ಮಟ್ಟದ ಬೃಹತ್​​ ಮಾದಕ ವಸ್ತು ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ದೆಹಲಿಯಿಂದ ಬೆಂಗಳೂರಿಗೆ ಮಾದಕ ವಸ್ತುಗಳನ್ನು ತಂದು ಮಾರಾಟ ಮಾಡುತ್ತಿದ್ದ ಆರೋಪದಡಿ ಸೆನೆಗಲ್​ ಮೂಲದ ಡನ್ಫಾ ಗೆರಾಲ್ಡ್, ತಾಂಜೇನಿಯಾ ಮೂಲದ ಮೆಗ್ರಾತ್​​, ನೈಜೀರಿಯಾ ಮೂಲದ ಒಬಿಯಾನಿಜ್​ ರೀಟಾ, ದೆಹಲಿ ಮೂಲದ ರೀನಾ ಯಾದವ್​​, ದೆಬಾಶಿಶ್​ ಬ್ಯಾನರ್ಜಿ ಮತ್ತು ಬೆಂಗಳೂರಿನ ಪೆಡ್ಲರ್‌ಗಳಾದ ಧೀರಜ್​​, ಮೊಹಮ್ಮದ್​​ ಮನ್ಸೂರ್​​ ಹಾಗೂ ಅಬ್ದುಲ್​ ಸಮದ್​ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ ಬರೋಬ್ಬರಿ 35 ಕೋಟಿ ರೂ. ಮೌಲ್ಯದ 17.4 ಕೆ.ಜಿ. ಎಂಡಿಎಂಎ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂಶಯ ಬಾರದಂತೆ ಸೀರೆಗಳು, ಇಸ್ತ್ರಿ ಮಾಡಲು ಬಳಸುವ ಟೇಬಲ್‌ಗಳು ಮತ್ತು ಕುರ್ಚಿಗಳ ಒಳಭಾಗದಲ್ಲಿ ಎಂಡಿಎಂಎ ಕ್ರಿಸ್ಟಲ್‌ಗಳನ್ನು ಅಡಗಿಸಿ, ಸುಂದರವಾದ ಉಡುಗೊರೆಗಳಂತೆ ಆರೋಪಿಗಳು ಪ್ಯಾಕ್ ಮಾಡುತ್ತಿದ್ದರು. ನಂತರ ಅವುಗಳನ್ನು ಚಾಣಾಕ್ಷತನದಿಂದ ದೆಹಲಿಯಿಂದ ರೈಲಿನ ಮೂಲಕ ಬೆಂಗಳೂರಿಗೆ ತರುತ್ತಿದ್ದರು. ಹೀಗೆ ಬೆಂಗಳೂರು ತಲುಪುವ ಮಾದಕವನ್ನು ನಿರ್ಜನ ಪ್ರದೇಶಗಳಲ್ಲಿ ಕಾರಿನಲ್ಲಿಟ್ಟುಕೊಂಡು ಮಾರಾಟ ಮಾಡುತ್ತಿದ್ದರು.

ಹೆಬ್ಬಾಳದ ಆನಂದನಗರದ ಸಮೀಪ ಮಾದಕ ವಸ್ತಿಗಳನ್ನು ಮಾರಾಟ ಮಾಡುತ್ತಿದ್ದಾಗ ಮೂವರನ್ನು ವಶಕ್ಕೆ ಪಡೆದಿದ್ದ ಪೊಲೀಸರು 4 ಕೆ.ಜಿ. 300 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದರು. ಬಳಿಕ ಸರ್ಜಾಪುರದ ಚೂಡಸಂದ್ರದಲ್ಲಿರುವ ಸ್ಥಳೀಯ ಪೆಡ್ಲರ್​ ಮೊಹಮ್ಮದ್​ ಮನ್ಸೂರ್​ ನಿವಾಸದ ಮೇಲೆ ದಾಳಿ ನಡೆಸಿದಾಗ 10 ಕೆ.ಜಿ ಎಂಡಿಎಂಎ ಪತ್ತೆಯಾಗಿತ್ತು. ​

ಅಬ್ದುಲ್ ಸಮದ್ ಎಂಬಾತನ ಹೆಣ್ಣೂರಿನ ನಿವಾಸದ ಮೇಲೆಯೂ ದಾಳಿ ನಡೆಸಿ 3.5 ಕೆ.ಜಿ ಮಾದಕ ವಸ್ತುವನ್ನು ಜಪ್ತಿ ಮಾಡಲಾಯಿತು. ವಿಚಾರಣೆ ವೇಳೆ, ದೆಹಲಿ ಮತ್ತು ಹರಿಯಾಣದವರೆಗೂ ಆರೋಪಿಗಳ ಜಾಲ ವಿಸ್ತರಿಸಿರುವುದು ಬಯಲಾಗಿತ್ತು. ಸುಮಾರು 40 ಜನ ಪೊಲೀಸ್ ಸಿಬ್ಬಂದಿಗಳ ವಿಶೇಷ ತಂಡ ದೆಹಲಿಯಲ್ಲಿ ಒಂದು ವಾರಕ್ಕೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular