HomeCrimeಯುಗಾದಿ ಹಬ್ಬಕ್ಕೆ ಅತ್ತೆ ಮನೆಗೆ ಬಂದಿದ್ದ ವ್ಯಕ್ತಿಯ ಬರ್ಬರ ಹತ್ಯೆ

ಯುಗಾದಿ ಹಬ್ಬಕ್ಕೆ ಅತ್ತೆ ಮನೆಗೆ ಬಂದಿದ್ದ ವ್ಯಕ್ತಿಯ ಬರ್ಬರ ಹತ್ಯೆ

ಯುಗಾದಿ ಹಬ್ಬದ ಆಚರಣೆಗೆಂದು ದಾವಣಗೆರೆಯಲ್ಲಿರುವ ತನ್ನ ಅತ್ತೆ ಮನೆಗೆ ಬಂದಿದ್ದ ಹಾನಗಲ್ ಮೂಲದ ವಿವಾಹಿತ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಬೈಚವಳ್ಳಿ ಗ್ರಾಮದ ಮಹಾಂತೇಶ್ ಪುಟ್ಟಪ್ಪ ಚೌರದ ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಈತನ ಕಣ್ಣಿಗೆ ಖಾರದ ಪುಡಿ ಎರಚಿ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮದ್ಯ ಸೇವನೆಯ ಚಟ ಹೊಂದಿದ್ದ ಈತ ಬುಧವಾರ ಮನೆಯಿಂದ ಹೊರ ಹೋಗಿದ್ದು, ಎಸ್ ಎಸ್ ಬಡಾವಣೆ ರಿಂಗ್ ರಸ್ತೆಯಲ್ಲಿರುವ ಆಫೀಸರ್ಸ್ ಕ್ಲಬ್ ಬಳಿ ಕೊಲೆ ಮಾಡಲಾಗಿದೆ.

ಬುಧವಾರ ರಾತ್ರಿಯಿಂದ ಗುರುವಾರ ಬೆಳಿಗ್ಗೆಯೊಳಗೆ ಈ ಕೃತ್ಯ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular