HomeLatest NewsGOOD NEWS : ಶೀಘ್ರವೇ ‘KPTCL’ ನಲ್ಲಿ ಖಾಲಿ ಇರುವ 35,000 ಹುದ್ದೆಗಳ ಭರ್ತಿ :...

GOOD NEWS : ಶೀಘ್ರವೇ ‘KPTCL’ ನಲ್ಲಿ ಖಾಲಿ ಇರುವ 35,000 ಹುದ್ದೆಗಳ ಭರ್ತಿ : CM ಸಿದ್ದರಾಮಯ್ಯ ‍ಘೋಷಣೆ

ಬೆಂಗಳೂರು : ಶೀಘ್ರವೇ ‘KPTCL’ ನಲ್ಲಿ ಖಾಲಿ ಇರುವ 35,000 ಹುದ್ದೆಗಳ ಭರ್ತಿ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಅವರು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘದ ವಜ್ರ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮದು ನುಡಿದಂತೆ ನಡೆಯುವ ಸರ್ಕಾರ. ನಿಮ್ಮ ಬೇಡಿಕೆಗಳ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತೇವೆ. NPS ಜಾರಿ ಮಾಡಿದ್ದು ಕೇಂದ್ರ ಸರ್ಕಾರ. ನಾವು OPS ಜಾರಿಯನ್ನು ಪ್ರಣಾಳಿಕೆಯಲ್ಲೇ ಘೋಷಿಸಿದ್ದೇವೆ. ಈ ಬಗ್ಗೆ ಚರ್ಚಿಸಿ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

1964 ರಲ್ಲಿ ಆರಂಭವಾದ ನೌಕರರ ಸಂಘ ಇಷ್ಟು ಮಹತ್ತರ ವರ್ಷಗಳ ಕಾಲ ನಿರಂತರವಾಗಿ ನೌಕರರ ಕಷ್ಟ ಸುಖಗಳಿಗೆ ಸ್ಪಂದಿಸಿ, ಪ್ರಾಮಾಣಿಕ ಹೋರಾಟ ನಡೆಸುತ್ತಿದೆ. ಜೊತೆಗೆ ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಪೂರೈಸುವ ಹೊಣೆಗಾರಿಕೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದೀರಿ. ಇದಕ್ಕೆ ನೀವೆಲ್ಲರೂ ಅಭಿನಂದನಾರ್ಹರು ಎಂದು ಶ್ಲಾಘಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

1908 ರಲ್ಲಿ ಮೊದಲ ಬಾರಿ ಅರಮನೆಗೆ ವಿದ್ಯುತ್ ಬಂತು. ಅಲ್ಲಿಂದ ಇಲ್ಲೀವರೆಗೆ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ನಾವು 34000 ಮೆಘಾ ವ್ಯಾಟ್ ಉತ್ಪಾದನೆ ಮಾಡುತ್ತಿರುವ ರಾಜ್ಯ ಎನ್ನುವ ಹೆಗ್ಗಳಿಕೆ ಕೇವಲ ನಮ್ಮ ರಾಜ್ಯದ್ದಾಗಿದೆ ಎಂದರು. ಆಹಾರ ಉತ್ಪಾದನೆಯಲ್ಲಿ ನಾವು ಸ್ವಾವಲಂಬಿಗಳಾಗುತ್ತಿರುವುದು ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬಿಗಳಾಗಿರುವ ಕಾರಣಕ್ಕೇ ಎಂದು ವಿಶ್ಲೇಷಿಸಿದರು.

ರೈತರಿಗೆ, ಕೃಷಿಗೆ, ಪಂಪ್ ಸೆಟ್ ಗಳಿಗೆ ಹಗಲಲ್ಲೂ 7 ಗಂಟೆ ಅಗತ್ಯ ವಿದ್ಯುತ್ ಸರಬರಾಜು ಮಾಡಲು ಶಕ್ತರಾಗುತ್ತೇವೆ. ಈ ಗುರಿ ಇಟ್ಟುಕೊಂಡು ಕೆಲಸಗಳು ನಡೆಯುತ್ತಿವೆ. 60000 ಮೆಘಾ ವ್ಯಾಟ್ ಉತ್ಪಾದನೆ ಗುರಿ ನಾವು ತಲುಪಿದ ತಕ್ಷಣ ಇದು ಸಾಧ್ಯವಾಗಲಿದೆ. ವಿದ್ಯುತ್ ಪ್ರಮುಖ ಕಚ್ಛಾವಸ್ತು ಎನ್ನುವುದನ್ನು ನಾವು ಮರೆಯಬಾರದು ಎಂದರು. ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂಧನ ಸಚಿವ ಕೆಜೆ ಜಾರ್ಜ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೆಪಿಟಿಸಿಎಲ್ ಅಧಿಕಾರಿಗಳು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular