ವಿದ್ಯುತ್ ಕಂಪನಿಗಳ 389.66 ಕೋಟಿ ರೂ. ಬಾಕಿ ಮನ್ನಾ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ವಿದ್ಯುತ್ ಕಂಪನಿಗಳ 389.66 ಕೋಟಿ ರೂ. ಬಾಕಿ ಮನ್ನಾ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತಜ್ಯೋತಿ ಯೋಜನೆಗಳಡಿ 389.66 ಕೋಟಿ ರೂ.ಗಳು ಬಾಕಿ ಉಳಿದಿದ್ದವು. ಬಾಕಿ ಇರುವುದರಿಂದ ಗೃಹಜ್ಯೋತಿಯಡಿ ಉಚಿತ ವಿದ್ಯುತ್ ನೀಡುವುದು ಕಷ್ಟವಾಗುತ್ತಿತ್ತು. ಆದ್ದರಿಂದ ಬಾಕಿ ಮೊತ್ತವನ್ನು ಒಂದು ಬಾರಿಗೆ ಮನ್ನಾ ಮಾಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ರಾಜ್ಯಾದ್ಯಂತ ಐಪಿ ಸೆಟ್ಗಳಿಗೆ ನಿರಂತರ ಏಳು ಗಂಟೆಗಳ ಅವಧಿಗೆ ವಿದ್ಯುತ್ ಒದಗಿಸಲು 600 ಮೆಗಾವ್ಯಾಟ್/ಗಂಟೆ ಹಾಗೂ ಪ್ರತಿದಿನಕ್ಕೆ 14 ಮಿಲಿಯನ್ ಯುನಿಟ್ಗಳ ಅಗತ್ಯವಿದೆ. ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಪ್ರತಿದಿನ ಏಳು ತಾಸು ವಿದ್ಯುತ್ ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸುಮಾರು 1500 ಕೋಟಿ ರೂ. ಅಗತ್ಯವಿದೆ. ಅನುದಾನದ ಉಳಿತಾಯ, ಮರುಹಂಚಿಕೆಯ ಮೂಲಕ ಈ ವೆಚ್ಚ ಭರಿಸಲಾಗುವುದು ಎಂದರು.
ವಿದ್ಯುತ್ ಬಳಕೆಯಲ್ಲಿ ಕಳೆದ ವರ್ಷಕ್ಕಿಂತ ಶೇ. 45 ರಷ್ಟು ಹೆಚ್ಚಿದೆ. ಕೃಷಿ ಬಳಕೆಯಲ್ಲಿ ಶೇ. 55ರಿಂದ 119 ರಷ್ಟು ಹೆಚ್ಚಳವಾಗಿದೆ ಎಂದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read