HomeKarnatakaBIG NEWS : ಅಂಬಿಗ, ಗಂಗಾಮತ ಸೇರಿ 39 ಉಪಜಾತಿಗಳು ಶೀಘ್ರವೇ ʻSTʼ ಗೆ ಸೇರ್ಪಡೆ...

BIG NEWS : ಅಂಬಿಗ, ಗಂಗಾಮತ ಸೇರಿ 39 ಉಪಜಾತಿಗಳು ಶೀಘ್ರವೇ ʻSTʼ ಗೆ ಸೇರ್ಪಡೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಹಾವೇರಿ : ಗಂಗಾಮತ, ಅಂಬಿಗ, ಕೋಲಿ, ಕಬ್ಬಲಿಗ ಸೇರಿದಂತೆ 39 ಉಪಜಾತಿಗಳು ಪರಿಶಿಷ್ಟ ವರ್ಗಕ್ಕೆ ಸೇರಲು ಸಂಪೂರ್ಣ ಅರ್ಹತೆ  ಹೊಂದಿದ್ದು, ಈ ಸಮಾಜವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಲು ಸ್ವತಃ ನಾನೇ ಎರಡು ಸಲ ಕೇಂದ್ರಕ್ಕೆ ಪರಸಾವನೆ ಕಳುಹಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ 6ನೇ ಶರಣ ಸಂಸ್ಕೃತಿ ಉತ್ಸವ ಹಾಗೂ ನಿಜಶರಣ ಅಂಬಿಗರ ಚೌಡಯ್ಯನವರ 904ನೇ ಜಯಂತೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ  ಮಾತನಾಡಿದರು.

ಅಂಬಿಗ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಈಗಾಗಲೇ ಎರಡು ಬಾರಿ ರಾಜ್ಯ ಸರ್ಕಾರ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಿದೆ. ಪರಿಶಿಷ್ಟ ವರ್ಗಕ್ಕೆ ಸೇರಲು ಸಮುದಾಯ ಸಂಪೂರ್ಣ ಅರ್ಹತೆ ಪಡೆದಿದ್ದು, ಕೇಂದ್ರ ಸರ್ಕಾರ ಈಗ ಪುನಃ  ಕೇಳಿರುವ ಸ್ಪಷ್ಟೀಕರಣವನ್ನು  ಕೂಡಲೇ  ಮಾಹಿತಿ ತರಿಸಿ ಸ್ಪಷ್ಟೀಕರಣ ನೀಡಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಂತರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಕ್ರಮ ವಹಿಸಬೇಕು. 96-97 ರಲ್ಲಿಯೇ ಶಾಸಕರಾದ ದಿವಂಗತ ನಾರಾಯಣ ರಾವ್ ಎಸ್.ಟಿ ಗೆ ಸೇರಿಸಲು ಪ್ರಯತ್ನಿಸಿದ್ದರು ಎಂದರು.

ದೋಣಿ ನಡೆಸುವುದು ಹಾಗೂ ಮೀನು ಹಿಡಿಯುವ ಕಾಯಕ ಅಂಬಿಗರದ್ದು.  ಕಾಯಕದಲ್ಲಿ ಮೇಲುಕೀಳು ಎಂಬುದಿಲ್ಲ. ಮನುಷ್ಯರ ನಡುವೆ ತಾರತಮ್ಯ ಇರಬಾರದು. ಕಾಯಕವನ್ನು ಆಧರಿಸಿ ಮೇಲು ಕೀಳು ಎಂದು ತಾರತಮ್ಯ ಮಾಡಿದ್ದರ ವಿರುದ್ಧ ಬಸವಾದಿ ಶರಣರು ಹೋರಾಟ ಮಾಡಿದರು. ಈ ಸಾಲಿನಲ್ಲಿ ಅಂಬಿಗರ ಚೌಡಯ್ಯ ಮೊದಲನೇ ಸಾಲಿನಲ್ಲಿ ನಿಲ್ಲುತ್ತಾರೆ. ಅದಕ್ಕೆ ಬಸವಣ್ಣನವರು ಇವರಿಗೆ ನಿಜಶರಣ ಎಂದು ಕರೆದರು.

ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ಸ್ಥಾಪನೆಯನ್ನು ಹಿಂದೆ ನಮ್ಮ ಅವಧಿಯಲ್ಲಿಯೇ ಮಾಡಲಾಯಿತು. ಆರ್ಥಿಕ ಶಕ್ತಿ ಇಲ್ಲದ ಸಮಾಜ ಮುಖ್ಯ ವಾಹಿನಿಗೆ ಬರಲು ಸಾಧ್ಯವಿಲ್ಲ. ಸಮಸಮಾಜದ ಕನಸು ನನಸಾಗಲು ಆರ್ಥಿಕ, ಸಾಮಾಜಿಕ ಶಕ್ತಿ ಪ್ರತಿಯೊಬ್ಬರಲ್ಲೂ ಬರಬೇಕು. ಬಸವಾದಿ ಶರಣರು ಕಾಯಕ ಮತ್ತು ದಾಸೋಹ ಎಂಬ ಎರಡು ತತ್ವಗಳನ್ನು ನೀಡಿದ್ದಾರೆ. ಕಾಯಕ ಎಂದರೆ ಉತ್ಪಾದನೆ, ದಾಸೋಹ ಎಂದರೆ ವಿತರಣೆ. ಕಾಯಕದಲ್ಲಿ ಎಲ್ಲರೂ ತೊಡಗಿ ಉತ್ಪಾದನೆಯನ್ನು ಎಲ್ಲರೂ ಹಂಚಿಕೊಳ್ಳಬೇಕು ಎನ್ನುವುದು ಇದರ ಅರ್ಥ. ಇನ್ನೊಬ್ಬರ ಗಳಿಕೆಯನ್ನು ಕುಳಿತು ಅನುಭವಿಸಬಾರದು. ಜಾತಿ ವ್ಯವಸ್ಥೆಗೆ ಚಾಲನೆ ಇಲ್ಲದಿರುವುದು ಆರ್ಥಿಕ, ಸಾಮಾಜಿಕ ಚಟುವಟಿಕೆ ಇಲ್ಲದಿರುವುದರಿಂದ. ಇದಕ್ಕೆ ಚಾಲನೆ ನೀಡಬೇಕೆಂದು ಬಸವಾದಿ ಶರಣರು ಹೇಳಿದ್ದರು.

ಅಂಬಿಗರ ಚೌಡಯ್ಯನವರ ಹಾದಿಯಲ್ಲಿ ನಡೆಯುವುದು ನಾವು ಅವರಿಗೆ ಸಲ್ಲಿಸುವ ನಿಜವಾದ ಗೌರವ. ಅವರ ವಿಚಾರಗಳನ್ನು ಜನರಿಗೆ ತಿಳಿಸಲು ಜಯಂತ್ಯೋತ್ಸವವನ್ನು ಆಚರಿಸಲಾಗುತ್ತದೆ.  ನಮ್ಮ ಮಕ್ಕಳು ಯಾವ ಕಾರಣದಿಂದಲೂ ವಿದ್ಯೆಯಿಂದ ವಂಚಿತರಾಗಬಾರದು. ಸಮಾಜದ ಅಸಮಾನತೆಯನ್ನು ಹೋಗಲಾಡಿಸಬೇಕು. ಪಟ್ಟಭದ್ರ ಹಿತಾಸಕ್ತಿಯ ವಿರುದ್ಧ ನಿಲ್ಲಬೇಕಾಗುತ್ತದೆ. ಬದಲಾವಣೆ ಬಯಸದ ಜನ ಆಗಲೂ ಇದ್ದರು, ಈಗಲೂ ಇದ್ದಾರೆ. ನಾನು ಹಿಂದುಳಿದ ಸಮಾಜದೊಂದಿಗೆ ಸದಾ ಇರುತ್ತೇನೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular