HomeIndiaಲೋಕಸಭೆ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಶಾಕ್: ಇಬ್ಬರು ‘ಕೈ’ ಶಾಸಕರು ಸೇರಿ 4 ಶಾಸಕರು...

ಲೋಕಸಭೆ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಶಾಕ್: ಇಬ್ಬರು ‘ಕೈ’ ಶಾಸಕರು ಸೇರಿ 4 ಶಾಸಕರು ಬಿಜೆಪಿ ಸೇರ್ಪಡೆ

ಇಟಾನಗರ: ಲೋಕಸಭೆ ಚುನಾವಣೆಗೆ ಮುನ್ನ ಅರುಣಾಚಲ ಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿಗೆ ಬಲ ನೀಡುವಂತೆ ಇಬ್ಬರು ಕಾಂಗ್ರೆಸ್ ಶಾಸಕರು ಮತ್ತು ನ್ಯಾಷನಲ್ ಪೀಪಲ್ಸ್ ಪಾರ್ಟಿ(ಎನ್‌ಪಿಪಿ) ಯ ಇಬ್ಬರು ಶಾಸಕರು ಭಾನುವಾರ ಆಡಳಿತ ಕೇಸರಿ ಪಾಳಯಕ್ಕೆ ಸೇರಿದ್ದಾರೆ.

60 ಸದಸ್ಯರ ವಿಧಾನಸಭೆಯಲ್ಲಿ ಈಗ ಕಾಂಗ್ರೆಸ್ ಮತ್ತು ಎನ್‌ಪಿಪಿ ಎರಡೂ ತಲಾ ಇಬ್ಬರು ಶಾಸಕರನ್ನು ಹೊಂದಿವೆ.

ಹಿರಿಯ ಕಾಂಗ್ರೆಸ್ ಶಾಸಕ ಮತ್ತು ಮಾಜಿ ಕೇಂದ್ರ ಸಚಿವ ನಿನೊಂಗ್ ಎರಿಂಗ್ ಮತ್ತು ವಾಂಗ್ಲಿನ್ ಲೋವಾಂಗ್‌ಡಾಂಗ್, ಮತ್ತು ಎನ್‌ಪಿಪಿಯ ಮುಚು ಮಿಥಿ ಮತ್ತು ಗೋಕರ್ ಬಾಸರ್ ಅವರು ಕೇಸರಿ ಪಕ್ಷವನ್ನು ಇಟಾನಗರದ ಪ್ರಧಾನ ಕಛೇರಿಯಲ್ಲಿ ನಡೆದ ಸಮಾರಂಭದಲ್ಲಿ ಸೇರಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪೆಮಾ ಖಂಡು, ರಾಜ್ಯ ಬಿಜೆಪಿ ಅಧ್ಯಕ್ಷ ಬಿಯೂರಾಮ್ ವಾಗೆ ಉಪಸ್ಥಿತರಿದ್ದರು.

ಈ ವರ್ಷಾಂತ್ಯದಲ್ಲಿ ಈಶಾನ್ಯ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮತ್ತು ವಿಧಾನಸಭೆ ಚುನಾವಣೆಗಳು ಏಕಕಾಲದಲ್ಲಿ ನಡೆಯಲಿವೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular