BIG NEWS: ಪೊಲೀಸ್ ಎನ್ ಕೌಂಟರ್ ಗೆ ನಾಲ್ವರು ನಕ್ಸಲರು ಬಲಿ

ಮುಂಬೈ: ನಕ್ಸಲರ ವಿರುದ್ಧ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ನಾಲ್ವರು ನಕ್ಸಲರನ್ನು ಹೊಡೆದುರುಳಿಸಿದ ಘಟನೆ ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ನಡೆದಿದೆ.

ಗಡ್ಚಿರೋಲಿ ಅರಣ್ಯ ಪ್ರದೇಶದಲ್ಲಿ ಪೊಲೀಸರ ಎನ್ ಕೌಂಟರ್ ನಲ್ಲಿ ನಾಲ್ವರು ನಕ್ಸಲರನ್ನು ಸದೆಬಡಿಯಲಾಗಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ದುಷ್ಕೃತ್ಯಗಳನ್ನು ನಡೆಸಲು ನಕ್ಸಲರು ಸಂಚು ರೂಪಿಸಿ, ಗಡ್ಚಿರೋಲಿ ಅರಣ್ಯ ಪ್ರದೇಶದಲ್ಲಿ ಅಡಗಿ ಕುಳಿತಿದ್ದರು.

ಮಹಾರಾಷ್ಟ್ರ ಪೊಲೀಸರ ವಿಶೇಷ ಸಿ-60 ಕಮಾಂಡೋಗಳು ಮತ್ತು ಸಿಆರ್ ಪಿ ಎಫ್ ಕಮಾಂಡೊಗಳು ಅರಣ್ಯದೊಳಗೆ ನುಗ್ಗಿ ಕಾರ್ಯಾಚರಣೆ ನಡೆಸಿದ್ದು, ಇಂದು ಬೆಳಿಗ್ಗೆ ನಡೆದ ಕಾರ್ಯಾಚರಣೆಯಲ್ಲಿ ನಾಲ್ವರು ನಕ್ಸಲರು ಪೊಲೀಸ್ ಗುಂಡಿಗೆ ಬಲಿಯಾಗಿದ್ದಾರೆ.

ನಕ್ಸಲರಿಂದ ಕೆ 47 ರೈಫಲ್ ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಮೃತ ನಕ್ಸಲರ ಗುರುತನ್ನು ಪೊಲೀಸರು ಬಹಿರಂಗಪಡಿಸಿಲ್ಲ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read