HomeKarnatakaBIG NEWS: ಮಾದಕ ವಸ್ತು ಪ್ರಕರಣ: ಮೂವರು ಅಮಾಯಕರನ್ನು ಬಂಧಿಸಿದ್ದ ನಾಲ್ವರು ಪೊಲೀಸ್ ಸಿಬ್ಬಂದಿಗಳು ಸಸ್ಪೆಂಡ್

BIG NEWS: ಮಾದಕ ವಸ್ತು ಪ್ರಕರಣ: ಮೂವರು ಅಮಾಯಕರನ್ನು ಬಂಧಿಸಿದ್ದ ನಾಲ್ವರು ಪೊಲೀಸ್ ಸಿಬ್ಬಂದಿಗಳು ಸಸ್ಪೆಂಡ್

ಬೆಂಗಳೂರು: ಸತ್ಯಾಸತ್ಯತೆ ಪರಿಶೀಲಿಸದೇ ಮಾದಕ ವಸ್ತುಗಳ ಮಾರಟ ಪ್ರಕರಣ ಸಂಬಂಧ ಮೂವರು ಅಮಾಯಕರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದ ಪ್ರಕರಣ ಸಂಬಂಧ, ಪಿಎಸ್ ಐ ಸೇರಿದಂತೆ ನಾಲ್ವರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತುಗೊಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬನಶಂಕರಿ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಶ್ರೀಧರ್ ಗುಗ್ರಿ, ಸಹಾಯಕ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಎಸ್.ಕೆ.ರಾಜು, ಕಾನ್ಸ್ ಟೇಬಲ್ ಗಳಾದ ಸತೀಶ್ ಬಗಲಿ ಹಾಗೂ ತಿಮ್ಮಣ್ಣ ಪೂಜಾರ ಅವರನ್ನು ಕರ್ತವ್ಯಲೋಪ ಆರೋದಡಿ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಬಾತ್ಮೀದಾರನ ಮಾತು ಕೇಳಿ ಸತ್ಯಾಸತ್ಯತೆ ಪರಿಶೀಲನೆ ನಡೆಸದೇ ಮೂವರು ಅಮಾಯಕರನ್ನು ಬಂಧಿಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ನಾಲ್ವರು ಸಸ್ಪೆಂಡ್ ಆಗಿದ್ದಾರೆ. ಇನ್ನು ಪೊಲೀಸ್ ಬಾತ್ಮೀದಾರ ರಾಜನ್ ಹಾಗೂ ಈತನ ಸ್ನೇಹಿತೆ ಚೈತ್ರಾ ಎಂಬಾಕೆಯನ್ನು ಸುಬ್ರಹ್ಮಣ್ಯಪುರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular