
ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್ ಗಢದಲ್ಲಿ ಬಿಜೆಪಿ ಮುನ್ನಡೆಯಲ್ಲಿದ್ದು, ಅಧಿಕರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.
ಮಧ್ಯಪ್ರದೇಶದಲ್ಲಿ ಬಿಜೆಪಿ 164 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 64 ಕ್ಷೇತ್ರಗಳಲ್ಲಿ ಹಾಗೂ ಇತರೆ 2 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿವೆ.
ರಾಜಸ್ಥಾನದಲ್ಲಿ ಬಿಜೆಪಿ 115 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ 71 ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಿದೆ. ಇತರೆ 13 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿವೆ.
ಛತ್ತೀಸ್ ಗಢದಲ್ಲಿ ಬಿಜೆಪಿ 55 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದರೆ ಕಾಂಗ್ರೆಸ್ 33 ಹಾಗೂ ಇತರೆ 2 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಮ್ಯಾಜಿಕ್ ಸಂಖ್ಯೆ 46.
ತೆಲಂಗಾಣದಲ್ಲಿ ಕಾಂಗ್ರೆಸ್ 69 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಬಿಆರ್ ಎಸ್ 35 ಕ್ಷೇತ್ರಗಳಲ್ಲಿ, ಬಿಜೆಪಿ 9 ಕ್ಷೇತ್ರಗಳಲ್ಲಿ ಎಐಎಂಐಎಂ 6 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.
ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್ ಗಢದಲ್ಲಿ ಬಿಜೆಪಿ ಬಹುಮತ ಪಡೆದುಕೊಂಡಿದ್ದು, ಅಧಿಕಾರಕ್ಕೇರುವುದು ಖಚಿತವಾಗಿದೆ. ಇನ್ನು ತೆಲಂಗಾಣದಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದೆ. ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಬಾಕಿಯಿದೆ.

