HomeLatest NewsBIG UPDATE : ಮಹಾರಾಷ್ಟ್ರದಲ್ಲಿ ಮಧ್ಯರಾತ್ರಿ ಕುಸಿದ 4 ಅಂತಸ್ತಿನ ಕಟ್ಟಡ ; ನಿದ್ರೆಯಲ್ಲೇ 9...

BIG UPDATE : ಮಹಾರಾಷ್ಟ್ರದಲ್ಲಿ ಮಧ್ಯರಾತ್ರಿ ಕುಸಿದ 4 ಅಂತಸ್ತಿನ ಕಟ್ಟಡ ; ನಿದ್ರೆಯಲ್ಲೇ 9 ಮಂದಿ ದುರ್ಮರಣ |WATCH VIDEO

ಮುಂಬೈ: ಮಹಾರಾಷ್ಟ್ರದ ಭಿವಂಡಿಯಲ್ಲಿ ಗುರುವಾರ ತಡರಾತ್ರಿ ನಾಲ್ಕು ಅಂತಸ್ತಿನ ವಸತಿ ಕಟ್ಟಡ ಕುಸಿದು ಬಿದ್ದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಇನ್ನೂ ಕೆಲವರು ಅವಶೇಷಗಳಡಿ ಸಿಲುಕಿರುವ ಶಂಕೆ ಇದ್ದು, ರಕ್ಷಣಾ ಕಾರ್ಯಾಚರಣೆ ತೀವ್ರಗತಿಯಲ್ಲಿ ಮುಂದುವರಿದಿದೆ.

ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಭಿವಂಡಿ ಪ್ರದೇಶದಲ್ಲಿ ಗುರುವಾರ ಮಧ್ಯರಾತ್ರಿ ಭೀಕರ ಅಪಘಾತ ಸಂಭವಿಸಿದೆ. ನಾಲ್ಕು ಅಂತಸ್ತಿನ ವಸತಿ ಕಟ್ಟಡ ಏಕಾಏಕಿ ಕುಸಿದು ಬಿದ್ದ ಪರಿಣಾಮ ಕನಿಷ್ಠ 9 ಮಂದಿ ಮೃತಪಟ್ಟಿದ್ದು, ಒಬ್ಬ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.ಅಪಘಾತದ ವೇಳೆ ಕಟ್ಟಡದಲ್ಲಿ ನಡೆಯುತ್ತಿದ್ದ ದುರಸ್ತಿ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರು ಹಾಗೂ ಕೆಲ ನಿವಾಸಿಗಳು ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾತ್ರಿ 9 ಗಂಟೆಗೆ ಕೇಳಿಬಂದ ವಿಚಿತ್ರ ಶಬ್ದ; ಎಚ್ಚೆತ್ತ ಸ್ಥಳೀಯರು
ಸ್ಥಳೀಯರ ಪ್ರಕಾರ, ಗುರುವಾರ ರಾತ್ರಿ ಸುಮಾರು 9 ಗಂಟೆಗೆ ಕಟ್ಟಡದಿಂದ ಭಾರೀ ಶಬ್ದಗಳು ಕೇಳಿಬಂದಿದ್ದು, ಗೋಡೆಗಳಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದವು. ಇದರಿಂದ ಆತಂಕಗೊಂಡ ನಿವಾಸಿಗಳು ತಕ್ಷಣವೇ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು.ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಕಟ್ಟಡದಲ್ಲಿದ್ದ ಹಲವು ಕುಟುಂಬಗಳನ್ನು ಖಾಲಿ ಮಾಡಿಸುವ ಕಾರ್ಯ ಆರಂಭಿಸಿದರು. ಆದರೆ ಕೆಲವರು ಇನ್ನೂ ತಮ್ಮ ಮನೆಗಳಿಂದ ಹೊರಬರುತ್ತಿದ್ದ ಸಮಯದಲ್ಲೇ, ರಾತ್ರಿ ಸುಮಾರು 11.30ಕ್ಕೆ ಕಟ್ಟಡದ ‘ಬಿ’ ವಿಂಗ್ ಏಕಾಏಕಿ ಕುಸಿದು ನೆಲಸಮವಾಯಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“ನಾವು ಹೊರಬಂದ ಕೆಲವೇ ನಿಮಿಷಗಳಲ್ಲಿ ಕಟ್ಟಡ ಕುಸಿಯಿತು”
ಭಿವಂಡಿ-ನಿಜಾಂಪುರ ಮಹಾನಗರ ಪಾಲಿಕೆಯ ಸಹಾಯಕ ಆಯುಕ್ತ ಅರವಿಂದ್ ಘೋಗಾರೆ ಮಾತನಾಡಿ, ಕಟ್ಟಡ ಹಾನಿಗೊಳಗಾಗಿದೆ ಎಂಬ ಮಾಹಿತಿ ಬಂದ ತಕ್ಷಣ ತಮ್ಮ ತಂಡದೊಂದಿಗೆ ಸ್ಥಳಕ್ಕೆ ತೆರಳಿದ್ದಾಗಿ ಹೇಳಿದರು.”ನಾವು ಕಟ್ಟಡದೊಳಗೆ ಹೋಗಿ ಹಲವರನ್ನು ಸುರಕ್ಷಿತವಾಗಿ ಹೊರಗೆ ಕರೆತಂದೆವು. ಕೆಲವೇ ನಿಮಿಷಗಳಲ್ಲಿ ಕಟ್ಟಡ ಕುಸಿದು ಬಿತ್ತು,” ಎಂದು ಅವರು ತಿಳಿಸಿದರು.

NDRF ತಂಡದಿಂದ ರಕ್ಷಣಾ ಕಾರ್ಯಾಚರಣೆ

ಮಾಹಿತಿ ದೊರೆತ ತಕ್ಷಣ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯಾ ಪಡೆ (NDRF), ಠಾಣೆ ವಿಪತ್ತು ಪ್ರತಿಕ್ರಿಯಾ ಪಡೆ (TDRF), ಸ್ಥಳೀಯ ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು.ಇಲ್ಲಿವರೆಗೆ ಅವಶೇಷಗಳಡಿಯಿಂದ 9 ಮಂದಿ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಗಾಯಗೊಂಡ ಬಾಲಕ ಸೇರಿದಂತೆ ಏಳು ಮಂದಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿ ಸ್ನಿಫರ್ ಡಾಗ್ಗಳು, ನಾಲ್ಕು ಅಗ್ನಿಶಾಮಕ ವಾಹನಗಳು, ಆಂಬುಲೆನ್ಸ್ಗಳು ಹಾಗೂ ಜೆಸಿಬಿ ಯಂತ್ರಗಳ ಸಹಾಯದಿಂದ ಅವಶೇಷ ತೆರವು ಕಾರ್ಯಾಚರಣೆ ವೇಗವಾಗಿ ನಡೆಯುತ್ತಿದೆ.


For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular