HomeLatest NewsSHOCKING : ಎದೆ ಉರಿ ಎಂದ ಕೆಲವೇ ಕ್ಷಣಗಳಲ್ಲಿ ಚಿತ್ರದುರ್ಗದಲ್ಲಿ 4 ವರ್ಷದ ಬಾಲಕ ಸಾವು...

SHOCKING : ಎದೆ ಉರಿ ಎಂದ ಕೆಲವೇ ಕ್ಷಣಗಳಲ್ಲಿ ಚಿತ್ರದುರ್ಗದಲ್ಲಿ 4 ವರ್ಷದ ಬಾಲಕ ಸಾವು ; ಹೃದಯಾಘಾತ ಶಂಕೆ!

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ನಾಲ್ಕು ವರ್ಷದ ಬಾಲಕನೊಬ್ಬ ಎದೆ ಉರಿಯುತ್ತಿದೆ ಎಂದು ಹೇಳಿದ ಕೆಲವೇ ಕ್ಷಣಗಳಲ್ಲಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಮೃತ ಬಾಲಕನನ್ನು ವೈಷ್ಣವ್ (4) ಎಂದು ಗುರುತಿಸಲಾಗಿದೆ. ಆತ ಹಿರಿಯೂರು ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಅವರ ಪುತ್ರನಾಗಿದ್ದಾನೆ.

ಮಾಹಿತಿಯ ಪ್ರಕಾರ, ವೈಷ್ಣವ್‌ಗೆ ಏಕಾಏಕಿ ಎದೆ ಉರಿ ಕಾಣಿಸಿಕೊಂಡಿದ್ದು, ಈ ಬಗ್ಗೆ ಆತ ಪೋಷಕರಿಗೆ ತಿಳಿಸಿದ್ದಾನೆ. ತಕ್ಷಣವೇ ಆತಂಕಗೊಂಡ ಪೋಷಕರು ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದಾರೆ. ಆದರೆ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಬಾಲಕ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದುಬಂದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಬಾಲಕ ಹೃದಯಾಘಾತದಿಂದ ಮೃತಪಟ್ಟಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದರೆ ಸಾವಿನ ನಿಖರ ಕಾರಣ ವೈದ್ಯಕೀಯ ಪರೀಕ್ಷೆ ಮತ್ತು ವರದಿ ಬಳಿಕವೇ ಸ್ಪಷ್ಟವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇತ್ತೀಚಿನ ದಿನಗಳಲ್ಲಿ ಕಡಿಮೆ ವಯಸ್ಸಿನ ಮಕ್ಕಳಲ್ಲೂ ಹೃದಯ ಸಂಬಂಧಿತ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿರುವ ಘಟನೆಗಳು ಆತಂಕಕ್ಕೆ ಕಾರಣವಾಗಿದ್ದು, ಈ ಘಟನೆ ಹಿರಿಯೂರು ಪ್ರದೇಶದಲ್ಲಿ ದುಃಖದ ವಾತಾವರಣ ಸೃಷ್ಟಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular