27 ವರ್ಷದ ಯುವಕನೊಬ್ಬ 4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ಒಡಿಶಾದ ಗಂಜಾಂನಲ್ಲಿ ನಡೆದಿದೆ.
ಸಂಬಂಧಿಯಿಂದಲೇ ಈ ಪೈಶಾಚಿಕ ಕೃತ್ಯ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮುಕನನ್ನು ಬಂಧಿಸಲಾಗಿದ್ದು, ನಿರ್ಮಾಣ ಹಂತದ ಕಟ್ಟಡದಲ್ಲಿದ್ದ ಮಗುವಿನ ಮೃತದೇಹ ಪತ್ತೆಯಾಗಿದೆ.
ಮಗು ಮನೆ ಬಳಿ ಇಲ್ಲದಿರುವುದನ್ನು ಕಂಡು ಪೋಷಕರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಮಗು ನಿರ್ಮಾಣಹಂತದ ಕಟ್ಟಡಲ್ಲಿ ಶವವಾಗಿ ಪತ್ತೆಯಾಗಿದೆ. ಮಗುವಿನ ಪೋಷಕರು ನೀಡಿದ ದೂರಿನ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಿ, ಪೋಕ್ಸೋ ಕೇಸ್ ದಾಖಲಿಸಲಾಗಿದೆ.
ಮಗುವನ್ನು ಚಾಕೋಲೆಟ್ ಕೊಡುಸುವುದಾಗಿ ಹೇಳಿ ನಂಬಿಸಿ ಗ್ರಾಮದಲ್ಲಿ ನಡೆಯುತ್ತಿದ್ದ ಹಬ್ಬಕ್ಕೆ ಕರೆದೊಕೊಂಡು ಹೋಗುವ ನೆಪದಲ್ಲಿ ಕರೆದೊಯ್ದು ಆರೋಪಿ ಈ ಕೃತ್ಯವೆಸಗಿದ್ದಾನೆ. ಅತ್ಯಾಚಾರವೆಸಗಿ ಬಳಿಕ ಮಗುವಿನ ಕತ್ತು ಹಿಸುಕಿ ಹತ್ಯೆಗೈದು ಕಟ್ಟಡದಲ್ಲಿ ಶವವಿಟ್ಟು ಪರಾರಿಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.