ಬೆಳಗಾವಿ: ಹಾಸ್ಟೆಲ್ ನಲ್ಲಿ ಆಹಾರ ಸೇವಿಸಿದ 40 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಭಾನುವಾರ ಕೆ.ಎಲ್.ಇ. ವಿಶ್ವವಿದ್ಯಾಲಯದ ಹಾಸ್ಟೆಲ್ ನಲ್ಲಿ ನಡೆದಿದೆ.
ವಸತಿ ನಿಲಯದಲ್ಲಿ ಆಹಾರ ಸೇವಿಸಿದ 40 ಜನ ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಯಾರಿಗೂ ಯಾವುದೇ ತೊಂದರೆಯಾಗಿಲ್ಲ. ಸ್ವಲ್ಪ ರೋಗಲಕ್ಷಣ ಕಂಡು ಬಂದವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ವಾಪಸ್ ಕಳುಹಿಸಲಾಗಿದೆ. 15 ವಿದ್ಯಾರ್ಥಿಗಳನ್ನು ಒಂದು ದಿನ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ದಾಖಲಿಸಲಾಗಿದ್ದು,. ಉಳಿದ ವಿದ್ಯಾರ್ಥಿಗಳಿಗೆ ಸ್ಥಳದಲ್ಲೇ ಚಿಕಿತ್ಸೆ ನೀಡಲಾಗಿದೆ.
ಆಹಾರದಲ್ಲಿ ವ್ಯತ್ಯಾಸವಾಗಿರುವ ಸಾಧ್ಯತೆಯಿದ್ದು ಈ ಹಿನ್ನೆಲೆಯಲ್ಲಿ ತನಿಖೆ ಕೈಗೊಳ್ಳಲಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಎಂ. ದಯಾನಂದ್ ಹೇಳಿದ್ದಾರೆ.
