ಬೆಂಗಳೂರು : 40 ವರ್ಷಗಳ ಹಿಂದೆಯೇ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಮುಡಾ ಸೈಟ್ ಸಿಕ್ಕಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ 40 ವರ್ಷಗಳ ಹಿಂದೆಯೇ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಮುಡಾ ಸೈಟ್ ಸಿಕ್ಕಿದೆ. ಅದರ ಸ್ವಾಧೀನ ಪತ್ರವನ್ನು ಪಡೆದುಕೊಂಡು ಈಗ ಸೈಟ್ ಕೊಟ್ಟಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ. ದೇವೇಗೌಡರ ಕುಟುಂಬದವರು ಪಡೆದಿರುವ ನಿವೇಶನಗಳ ಲೆಕ್ಕ ಕೊಡಲೇ? ಎಂದು ಸವಾಲ್ ಹಾಕಿದ್ದಾರೆ.
ಮೇಕೆದಾಟು ಯೋಜನೆ ಜಾರಿಯಿಂದ ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡಬಹುದು ಜೊತೆಗೆ ವಿದ್ಯುತ್ ಅನ್ನು ಸಹ ಉತ್ಪಾದಿಸಬಹುದು. ಮಳೆಗಾಲದಲ್ಲಿ ಸಮುದ್ರ ಸೇರುವ ನೀರನ್ನು ಸಂಗ್ರಹಿಸಿಟ್ಟು ಜಲಾಶಯಗಳಲ್ಲಿ ನೀರಿನ ಕೊರತೆಯಿದ್ದಾಗ ತಮಿಳುನಾಡಿಗೂ ನೀರು ಬಿಡಬಹುದು. ಮಂಡ್ಯದ ಸಂಸದರು ಕೇಂದ್ರದಲ್ಲಿ ಸಚಿವರಾಗಿದ್ದಾರೆ, ಅವರು ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಿದರೆ ಅಣೆಕಟ್ಟು ನಿರ್ಮಾಣ ಕಾರ್ಯ ಆರಂಭಿಸಲು ನಮ್ಮ ಸರ್ಕಾರ ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
40 ವರ್ಷಗಳ ಹಿಂದೆಯೇ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಮುಡಾ ಸೈಟ್ ಸಿಕ್ಕಿದೆ. ಅದರ ಸ್ವಾಧೀನ ಪತ್ರವನ್ನು ಪಡೆದುಕೊಂಡು ಈಗ ಸೈಟ್ ಕೊಟ್ಟಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ.
ದೇವೇಗೌಡರ ಕುಟುಂಬದವರು ಪಡೆದಿರುವ ನಿವೇಶನಗಳ ಲೆಕ್ಕ ಕೊಡಲೇ? #ಕನ್ನಡಸುದ್ದಿ #ಮುಡಾನಿವೇಶನ pic.twitter.com/5KcVSYIiuz— Siddaramaiah (@siddaramaiah) July 30, 2024

