HomeKarnataka402 ʻPSIʼ ಹುದ್ದೆಗಳ ನೇಮಕಾತಿ : ಲಿಖಿತ ಪರೀಕ್ಷೆ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿ

402 ʻPSIʼ ಹುದ್ದೆಗಳ ನೇಮಕಾತಿ : ಲಿಖಿತ ಪರೀಕ್ಷೆ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಮೇ 8 ರಂದು 402  ಪಿಎಸ್ ಐ ಹುದ್ದೆಗಳ ನೇರ ನೇಮಕಾತಿಗೆ ಲಿಖಿತ ಪರೀಕ್ಷೆ ನಡೆಸುವುದಾಗಿ ತಿಳಿಸಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ 402  ಪಿಎಸ್ ಐ ಹುದ್ದೆಗಳ ನೇಮಕಾತಿಗೆ ಮೇ 8 ಲಿಖಿತ ಪರೀಕ್ಷೆ ನಡೆಯಲಿದ್ದು, ದೈಹಿಕ ಸಾಮರ್ಥ್ಯ ಪರೀಕ್ಷೆಯಲ್ಲಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳ ಪಟ್ಟಿಯನ್ನು ಗೃಹ ಇಲಾಖೆಗೆ ನೀಡಲಾಗಿದ್ದು, ಅವರಿಗೆ ಮಾತ್ರ ಲಿಖಿತ ಪರೀಕ್ಷೆ ನಡೆಯಲಿದೆ.

ರಾಜ್ಯ ಸರ್ಕಾರವು ಇತ್ತೀಚೆಗಷ್ಟೇ 545 ಪಿಎಸ್‌ ಐ ಹುದ್ದೆಗಳಿಗೆ ಮರುಪರೀಕ್ಷೆ ನಡೆಸಿತ್ತು. ಇದೀಗ 402  ಪಿಎಸ್ ಐ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ ನಡೆಸುವ ಜವಾಬ್ದಾರಿಯನ್ನು ಕೆಇಎಗೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular