HomeLatest Newsಐತಿಹಾಸಿಕ ಲಕ್ಕುಂಡಿಯ 44 ತಾಣಗಳು ಸಂರಕ್ಷಿತ ಸ್ಮಾರಕ ಪಟ್ಟಿಗೆ ಸೇರ್ಪಡೆ

ಐತಿಹಾಸಿಕ ಲಕ್ಕುಂಡಿಯ 44 ತಾಣಗಳು ಸಂರಕ್ಷಿತ ಸ್ಮಾರಕ ಪಟ್ಟಿಗೆ ಸೇರ್ಪಡೆ

ಗದಗ: ಐತಿಹಾಸಿಕ ಲಕ್ಕುಂಡಿ ಗ್ರಾಮದ 44 ತಾಣಗಳನ್ನು ಸಂರಕ್ಷಿತ ಸ್ಮಾರಕಗಳ ಪಟ್ಟಿಗೆ ಸೇರ್ಪಡೆ ಮಾಡಲಾಗುತ್ತಿದೆ. ಈ ತಾಣಗಳು ಸರ್ಕಾರದ ನೇರ ಉಸ್ತುವಾರಿಗೆ ಒಳಪಡಲಿವೆ ಎಂದು ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.

ಭಾನುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಕ್ಕುಂಡಿ ಪಾರಂಪರಿಕ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಉನ್ನತ ಮಟ್ಟದ ಸಲಹಾ ಸಮಿತಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಕ್ಕುಂಡಿ ಗ್ರಾಮದ 44 ತಾಣಗಳನ್ನು ಸಂರಕ್ಷಿತ ಸ್ಮಾರಕಗಳ ಪಟ್ಟಿಗೆ ಸೇರ್ಪಡೆ ಮಾಡಲಾಗುವುದು. ಈ ತಾಣಗಳು ಸರ್ಕಾರದ ನೇರ ುಸ್ತುವಾರಿಗೆ ಒಳಪಡಲಿದ್ದು, ಇವುಗಳ ಅಭಿವೃದ್ಧಿ ಮತ್ತು ರಕ್ಷಣೆಗೆ ಹೆಚ್ಚಿನ ಅನುದಾನ ಲಭ್ಯವಾಗಲಿದೆ ಎಂದು ಹೇಳಿದ್ದಾರೆ.

ಲಕ್ಕುಂಡಿ ಗ್ರಾಮದ 16 ತಾಣಗಳನ್ನು ಈಗಾಗಲೇ ರಾಜ್ಯ ಸಂರಕ್ಷಿತ ಸ್ಮಾರಕಗಳು ಎಂದು ಘೋಷಿಸಲಾಗಿದೆ. ಇದರ ಜೊತೆಗೆ ಇನ್ನೂ 28 ದೇವಾಲಯ, ಬಾವಿಗಳನ್ನು ಸಂರಕ್ಷಿತ ಸ್ಮಾರಕಗಳಾಗಿ ಘೋಷಿಸಲಾಗುವುದು. ಇದರಿಂದಾಗಿ ಒಟ್ಟು 44 ತಾಣಗಳು ಸರ್ಕಾರದ ನೇರ ಉಸ್ತುವಾರಿಗೆ ಒಳಪಡಲಿದೆ. ಇವುಗಳ ಅಭಿವೃದ್ಧಿ ಮತ್ತು ರಕ್ಷಣೆಗೆ ಹೆಚ್ಚಿನ ಅನುದಾನ ಲಭ್ಯವಾಗುತ್ತದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular