HomeLatest Newsಮೆಡಿಕಲ್ ಸೀಟು ಕೊಡಿಸುವುದಾಗಿ 45 ಲಕ್ಷ ರೂ. ವಂಚನೆ: ಮಾಜಿ ಸಚಿವ ಆರ್.ಎಲ್. ಜಾಲಪ್ಪ ಸೊಸೆಗೆ...

ಮೆಡಿಕಲ್ ಸೀಟು ಕೊಡಿಸುವುದಾಗಿ 45 ಲಕ್ಷ ರೂ. ವಂಚನೆ: ಮಾಜಿ ಸಚಿವ ಆರ್.ಎಲ್. ಜಾಲಪ್ಪ ಸೊಸೆಗೆ ಜೈಲು ಶಿಕ್ಷೆ

ಬೆಂಗಳೂರು: ಮೆಡಿಕಲ್ ಸೀಟು ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ಸೊಸೆ ನಾಗವೇಣಿ ಅವರನ್ನು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದ್ದು, ಅವರಿಗೆ ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಮಹತ್ವದ ಆದೇಶ ನೀಡಿದೆ.

ವೈದ್ಯಕೀಯ ಸೀಟು ಕೊಡಿಸುವುದಾಗಿ ವಂಚಿಸಿರುವ ಸಂಬಂಧ ಪ್ರಕಾಶ್ ಕುಮಾರ್ ಯರಪ್ಪ ಎಂಬುವರು 2021 ರಲ್ಲಿ ಯಲಹಂಕ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಮೆಡಿಕಲ್ ಸೀಟು ಕೊಡುವುದಾಗಿ ಹಂತ ಹಂತವಾಗಿ 45 ಲಕ್ಷ ರೂ ಹಣ ಪಡೆದು ವಂಚಿಸಿದ್ದಾರೆ ಎಂದು ದೂರಿದ್ದರು.

ಅವರ ದೂರಿನ ಅನ್ವಯ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದ ಯಲಹಂಕ ಠಾಣೆ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ಪುತ್ರ ಹಾಗೂ ಮಾಜಿ ಶಾಸಕ ಜೆ. ನರಸಿಂಹಸ್ವಾಮಿ ಅವರು ಮೊದಲನೇ ಆರೋಪಿಯಾಗಿದ್ದರು. ಆದರೆ ಅವರು ವಿಚಾರಣೆ ಬಾಕಿ ಇರುವಾಗಲೇ 2024ರಲ್ಲಿ ಮೃತಪಟ್ಟ ಕಾರಣ ಅವರ ವಿರುದ್ಧದ ಪ್ರಕರಣವನ್ನು ಕೈ ಬಿಡಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎರಡನೇ ಆರೋಪಿಯಾಗಿರುವ ನರಸಿಂಹಸ್ವಾಮಿಯವರ ಪತ್ನಿ ನಾಗವೇಣಿ ಅವರ ವಿರುದ್ಧದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ನ್ಯಾಯಾಧೀಶರಾದ ಸಂದೀಪ್ ಪಾಟೀಲ್ ಅವರು ಮಹತ್ವದ ತೀರ್ಪು ನೀಡಿದ್ದಾರೆ. ತೀರ್ಪು ಹೊರ ಬಿದ್ದ ಬೆನ್ನಲ್ಲೇ ಪೊಲೀಸರು ನಾಗವೇಣಿಯವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular