ಶೀಘ್ರವೇ 460 ವೈದ್ಯರ ನೇಮಕಾತಿಗೆ ಕ್ರಮ : ಸಚಿವ ದಿನೇಶ್‌ ಗುಂಡೂರಾವ್

ಬೆಂಗಳೂರು :  ಆರ್ಥಿಕ ಇಲಾಖೆಯ ಅನುಮತಿ ಪಡೆದು ಸದ್ಯದಲ್ಲೇ ಪೂರ್ಣ ಪ್ರಮಾಣದಲ್ಲಿ 460 ಸರ್ಕಾರಿ ವೈದ್ಯರ ನೇಮಕಾತಿ ಆಗಲಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ಮಲೆನಾಡಿನ ಜಿಲ್ಲೆಗಳು ಸೇರಿದಂತೆ ರಾಜ್ಯದ ವಿವಿಧೆಡೆ ಆರೋಗ್ಯ ಕೇಂದ್ರಗಳಲ್ಲಿ 460 ಹುದ್ದೆಗಳು ಖಾಲಿ ಇವೆ. ಜಿಲ್ಲಾ ಆರೋಗ್ಯಾಧಿಕಾರಿ ಹಂತದಲ್ಲಿ ಗುತ್ತಿಗೆ ಆಧಾರದಲ್ಲಿ ವೈದ್ಯರ ನೇಮಕಕ್ಕೆ ಸರ್ಕಾರ ಮುಂದಾಗಿತ್ತಾದರೂ ಅಭ್ಯರ್ಥಿಗಳು ಆಸಕ್ತಿ ತೋರಿಲ್ಲ. ಹೀಗಾಗಿ ಆರ್ಥಿಕ ಇಲಾಖೆಯ ಅನುಮತಿ ಪಡೆದು ಸದ್ಯದಲ್ಲೇ ಪೂರ್ಣ ಪ್ರಮಾಣದಲ್ಲಿ ಸರ್ಕಾರಿ ವೈದ್ಯರ ನೇಮಕಾತಿ ಆಗಲಿದೆ ಎಂದು ಹೇಳಿದ್ದಾರೆ.

ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸುವುದು ಸೇರಿದಂತೆ ಜನಸಾಮಾನ್ಯರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ಚಿಕಿತ್ಸೆ ಲಭ್ಯವಾಗುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಆ ಮೂಲಕ ಆರೋಗ್ಯ ಕರ್ನಾಟಕ ನಿರ್ಮಾಣ ನಮ್ಮ ಗುರಿಯಾಗಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read