HomeLatest Newsಜ. 24ರಂದು ಅರ್ಹ ಫಲಾನುಭವಿಗಳಿಗೆ 47,345 ಮನೆ ಹಂಚಿಕೆ

ಜ. 24ರಂದು ಅರ್ಹ ಫಲಾನುಭವಿಗಳಿಗೆ 47,345 ಮನೆ ಹಂಚಿಕೆ

ಚಿಂತಾಮಣಿ: ಜನವರಿ 24 ರಂದು 47,345 ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗುವುದು ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

ಚಿಂತಾಮಣಿ ತಾಲೂಕಿನ ಚಿನ್ನಸಂದ್ರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗ್ಯಾರಂಟಿಗಳ ಒತ್ತಡದ ನಡುವೆಯೂ ಕಾಂಗ್ರೆಸ್ ಸರ್ಕಾರ ಕಳೆದ ಫೆಬ್ರವರಿಯಲ್ಲಿ 36,789 ಮನೆಗಳನ್ನು ಹಂಚಿಕೆ ಮಾಡಿದೆ. ಜನವರಿ 24ರಂದು ಹುಬ್ಬಳ್ಳಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅರ್ಹ ಫಲ ಅನುಭವಿಗಳಿಗೆ 47,345 ಮನೆಗಳನ್ನು ಹಂಚಿಕೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಒಂದು ಮನೆ ನಿರ್ಮಾಣಕ್ಕೆ 7.5 ಲಕ್ಷ ರೂ. ವೆಚ್ಚವಾಗಲಿದ್ದು, ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ತಲಾ 1.5 ಲಕ್ಷ ರೂ ನೀಡಲಿದ್ದು, ಉಳಿದ 4.5 ಲಕ್ಷ ರೂ.ಗಳನ್ನು ಫಲಾನುಭವಿಗಳು ಭರಿಸಬೇಕಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular