HomeInternationalಅಮೆರಿಕ –ಇಸ್ರೇಲ್ ಜಂಟಿ ದಾಳಿಯಲ್ಲಿ ಒಂದೇ ಬಾರಿಗೆ ಇರಾನಿನ 48 ನಾಯಕರು ಸಾವು: ಟ್ರಂಪ್ ಮಾಹಿತಿ

ಅಮೆರಿಕ –ಇಸ್ರೇಲ್ ಜಂಟಿ ದಾಳಿಯಲ್ಲಿ ಒಂದೇ ಬಾರಿಗೆ ಇರಾನಿನ 48 ನಾಯಕರು ಸಾವು: ಟ್ರಂಪ್ ಮಾಹಿತಿ

ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ಮಿಲಿಟರಿ ಕಾರ್ಯಾಚರಣೆಯಲ್ಲಿ 48 ಇರಾನಿನ ನಾಯಕರು ಸಾವನ್ನಪ್ಪಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ಹೇಳಿದ್ದಾರೆ. ಜಂಟಿ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದ ನಂತರ ಈ ಬೆಳವಣಿಗೆ ನಡೆದಿದೆ.

“ನಾವು ಸಾಧಿಸುತ್ತಿರುವ ಯಶಸ್ಸನ್ನು ಯಾರೂ ನಂಬಲು ಸಾಧ್ಯವಿಲ್ಲ, 48 ನಾಯಕರು ಒಂದೇ ಹೊಡೆತದಲ್ಲಿ ಹೋಗಿದ್ದಾರೆ. ಮತ್ತು ಅದು ವೇಗವಾಗಿ ಸಾಗುತ್ತಿದೆ” ಎಂದು ಟ್ರಂಪ್ ಫಾಕ್ಸ್ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಈ ಕಾರ್ಯಾಚರಣೆಯನ್ನು ಇರಾನ್‌ನ ನಾಯಕತ್ವ ಮತ್ತು ಮಿಲಿಟರಿ ಕಮಾಂಡ್ ರಚನೆಯ ವಿರುದ್ಧ ನಿರ್ಣಾಯಕ ಹೊಡೆತ ಎಂದು ಬಣ್ಣಿಸಿದ ಅವರು, ಇರಾನ್ ಮಾತುಕತೆ ನಡೆಸಲು ಬಯಸುತ್ತಿದೆ ಮತ್ತು ಅದಕ್ಕೆ ಅವರು ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular