HomeLatest Newsಹಿರಿಯ ಆಟಗಾರರ ಅನುಪಸ್ಥಿತಿಯಲ್ಲೂ 3-1 ಅಂತರದಿಂದ ಟಿ20 ಸರಣಿ ಗೆದ್ದ ಟೀಂ ಇಂಡಿಯಾ

ಹಿರಿಯ ಆಟಗಾರರ ಅನುಪಸ್ಥಿತಿಯಲ್ಲೂ 3-1 ಅಂತರದಿಂದ ಟಿ20 ಸರಣಿ ಗೆದ್ದ ಟೀಂ ಇಂಡಿಯಾ

ರಾಯಪುರ: ನಾಲ್ಕನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 20 ರನ್ ಗಳ ಜಯಗಳಿಸಿದ್ದು, ಇನ್ನೊಂದು ಬಾಕಿ ಇರುವಂತೆಯೇ 3 -1 ಅಂತರದಲ್ಲಿ ಸರಣಿ ಜಯಿಸಿದೆ.

ಅನೇಕ ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಯುವಪಡೆ ಟಿ20 ಸರಣಿ ಗೆದ್ದು ಬೀಗಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿತು. ರಿಂಕು 46, ಜೈಸ್ವಾಲ್ 37 ರನ್ ಗಳಿಸಿದರು. ಸಿಂಗ್ 29 ಎಸೆತಗಳಲ್ಲಿ 46 ರನ್ ಸಿಡಿಸಿದರು. ಜಿತೇಶ್ ಶರ್ಮ 19 ಎಸೆತಗಳಲ್ಲಿ 35 ರನ್ ಗಳಿಸಿದರು. ಕೊನೆಯ ಎರಡು ಓವರ್ ಗಳಲ್ಲಿ ಕೇವಲ 13 ರನ್ ಗೆ ಐದು ವಿಕೆಟ್ ಗಳನ್ನು ಕಳೆದುಕೊಂಡಿತು. ಆಸ್ಟ್ರೇಲಿಯಾ ಪರ ದ್ವಾರ್ಷಿಯಸ್ 3 ವಿಕೆಟ್ ಪಡೆದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೆಲುವಿನ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ 20 ಓವರ್ ಗಳಲ್ಲಿ 7 ವಿಕೆಟ್ ಗೆ 154 ರನ್ ಗಳಿಸಿ ಸೋಲು ಕಂಡಿತು. ವೇಡ್ 36, ಹೆಡ್ 31 ರನ್ ಗಳಿಸಿದರು. ಭಾರತದ ಪರ ಅಕ್ಷರ್ 3 ವಿಕೆಟ್ ಪಡೆದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular