HomeIndiaಮಹಾರಾಷ್ಟ್ರ ಸಿಎಂ ಶಿಂಧೆ ಬಣಕ್ಕೆ ಶಾಕ್: ಮರಳಿ ಉದ್ಧವ್ ಠಾಕ್ರೆ ಬಣ ಸೇರಲು ಸಜ್ಜಾದ 6...

ಮಹಾರಾಷ್ಟ್ರ ಸಿಎಂ ಶಿಂಧೆ ಬಣಕ್ಕೆ ಶಾಕ್: ಮರಳಿ ಉದ್ಧವ್ ಠಾಕ್ರೆ ಬಣ ಸೇರಲು ಸಜ್ಜಾದ 6 ಶಾಸಕರ ದಂಡು…?

ಮುಂಬೈ: ಶಿವಸೇನೆಯ(ಏಕನಾಥ್ ಶಿಂಧೆ ಬಣ) ಕನಿಷ್ಠ ಐದರಿಂದ ಆರು ಶಾಸಕರು ಶಿವಸೇನೆ(ಯುಬಿಟಿ) ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ ಮತ್ತು ಪಕ್ಷಕ್ಕೆ ಮರಳುವ ಇಚ್ಛೆಯನ್ನು ತೋರಿಸಿದ್ದಾರೆ. ಶಿವಸೇನೆ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಹಿಂದಿರುಗುವ ಬಗ್ಗೆ ನಿರ್ಧರಿಸುತ್ತಾರೆ ಎಂದು ಮೂಲಗಳು ತಿಳಿಸಿವೆ.

ಮಹಾರಾಷ್ಟ್ರದ ಅಜಿತ್ ಪವಾರ್ ಅವರ ಎನ್‌ಸಿಪಿ ಬಣದ ಸುಮಾರು 10-15 ಶಾಸಕರು ಶರದ್ ಪವಾರ್ ಶಿಬಿರದೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗಿದೆ.

ಅಜಿತ್ ಪವಾರ್ ಅವರ ಎನ್‌ಸಿಪಿ ಏಕಾಂಗಿ ಲೋಕಸಭಾ ಸ್ಥಾನವನ್ನು ಗೆಲ್ಲುವಲ್ಲಿ ಯಶಸ್ವಿಯಾದ ನಂತರ ಮಹಾರಾಷ್ಟ್ರ ಅಸೆಂಬ್ಲಿ ಚುನಾವಣೆಗೆ ತಿಂಗಳುಗಳ ಮುಂಚೆಯೇ ಈ ಬೆಳವಣಿಗೆ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಾವುದೇ ಪಕ್ಷವನ್ನು ಹೆಸರಿಸದೆ ಎನ್‌ಸಿಪಿ(ಶರದ್‌ಚಂದ್ರ ಪವಾರ್) ರಾಜ್ಯ ಅಧ್ಯಕ್ಷ ಜಯಂತ್ ಪಾಟೀಲ್, ಹಲವಾರು ನಾಯಕರು ತಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದರು. ಜೂನ್ 9 ರಂದು ನಮ್ಮ ಸಭೆಯಲ್ಲಿ ನಾವು ಈ ಪ್ರಸ್ತಾಪಗಳ ಬಗ್ಗೆ ಯೋಚಿಸುತ್ತೇವೆ. ಜೂನ್ 10 ರಂದು ನಾವು ನಮ್ಮ ಸಂಸ್ಥಾಪನಾ ದಿನ ಆಚರರಿಸಲಿದ್ದೇ ಎಂದು ಅವರು ಹೇಳಿದರು.

ಕೇವಲ 17 ಸ್ಥಾನಗಳನ್ನು ಗಳಿಸಿದ ಆಡಳಿತಾರೂಢ ಮಹಾಯುತಿ ಮೈತ್ರಿಕೂಟಕ್ಕೆ ಮಹಾರಾಷ್ಟ್ರ ಲೋಕಸಭೆಯ ಫಲಿತಾಂಶಗಳು ವಿನಾಶಕಾರಿಯಾಗಿ ಪರಿಣಮಿಸಿದೆ. ಮತ್ತೊಂದೆಡೆ, ಎರಡು ಪಕ್ಷಗಳ ಒಡಕುಗಳಿಂದ ಕಂಗೆಟ್ಟಿರುವ ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ(ಎಂವಿಎ) 30 ಸ್ಥಾನಗಳನ್ನು ಗಳಿಸಿದೆ. ಕಾಂಗ್ರೆಸ್ 13 ಸ್ಥಾನಗಳನ್ನು ಗೆದ್ದುಕೊಂಡಿತು, ಶಿವಸೇನೆ(ಯುಬಿಟಿ) 9 ಮತ್ತು ಎನ್‌ಸಿಪಿ(ಶರದ್ಚಂದ್ರ ಪವಾರ್) 8 ಸ್ಥಾನಗಳನ್ನು ಗಳಿಸಿತು.

ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಸಾಧನೆಯ ಹೊಣೆ ಹೊತ್ತು ಬುಧವಾರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ, ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಮತ್ತು ಫಡ್ನವೀಸ್ ಉಪ ಮುಖ್ಯಮಂತ್ರಿಯಾಗಿ ಮುಂದುವರಿಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular