ಚಿಕ್ಕಮಗಳೂರು: ಅಪ್ರಾಪ್ತೆಗೆ ಬ್ಲಾಕ್ ಮೇಲ್ ಮಾಡಿ ಸಾಮೂಹಿಕ ಅತ್ಯಾಚಾರ ಎಸಗಿದ ಐದು ಮಂದಿಯನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ.
ಬ್ಲಾಕ್ ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಐದು ಜನರ ವಿರುದ್ಧ ಗೋಣಿಬೀಡು ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ. ಆರೋಪಿಗಳಾದ ಕುಶ, ನಿತೇಶ್, ಸಚಿನ್, ಚಂದ್ರಶೇಖರ್ ಬಂಧಿತತ ಆರೋಪಿಗಳು. ಮತ್ತೊಬ್ಬ ಆರೋಪಿ ಸುರೇಶ್ ನ್ಯಾಯಾಲಯದ ಮುಂದೆ ಶರಣಾಗಿದ್ದಾನೆ.
ಲೈಂಗಿಕ ದೌರ್ಜನ್ಯಕ್ಕೆ ಒಳಗಾದ 17 ವರ್ಷದ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾರೆ. ಆರೋಪಿಗಳು ಒಂದು ವರ್ಷದ ಹಿಂದೆ ತನ್ನ ಫೋಟೋವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದು ಬ್ಲಾಕ್ ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಬಾಲಕಿ ಗೋಣಿಬೀಡು ಪೊಲೀಸರಿಗೆ ದೂರು ನೀಡಿದ್ದರು.
ಅಪ್ರಾಫ್ತೆ ಕಾಲೇಜಿಗೆ ಹೋಗುವಾಗ ಬೇಲೂರಿನ ಯುವಕ ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಬೇಲೂರು ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿ ಜೈಲು ಪಾಲಾಗಿದ್ದಾನೆ. ಅಪ್ರಾಪ್ತಗೆ ಮಗುವಾಗಿದೆ. ಯುವಕ ಮತ್ತು ಅಪ್ರಾಪ್ತೆ ಇರುವ ಫೋಟೋ ಇಟ್ಟುಕೊಂಡು ಇವರು ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿದ್ದರು ಎನ್ನಲಾಗಿದೆ.

