HomeIndiaವೇಗವಾಗಿದ್ದ ಕಾರ್ ಮರಕ್ಕೆ ಡಿಕ್ಕಿ: 5 ಜನ ಸಾವು

ವೇಗವಾಗಿದ್ದ ಕಾರ್ ಮರಕ್ಕೆ ಡಿಕ್ಕಿ: 5 ಜನ ಸಾವು

ಹರಿಯಾಣದ ಸಿರ್ಸಾದಲ್ಲಿ ಕಾರ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 5 ಜನ ಸಾವು ಕಂಡಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಹರಿಯಾಣದ ಸಿರ್ಸಾ ಜಿಲ್ಲೆಯಲ್ಲಿ ಸೋಮವಾರ 7 ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಕಾರ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಮೃತರಲ್ಲಿ ಮೂವರು ಮಹಿಳೆಯರು, ಚಾಲಕ ಹಾಗೂ 2 ತಿಂಗಳ ಹೆಣ್ಣು ಮಗು ಸೇರಿದೆ. ಸಂತ್ರಸ್ತರು ಸಿರ್ಸಾದ ಖರಿಯನ್ ಹಳ್ಳಿಯಲ್ಲಿರುವ ಡೇರಾ ಬಾಬಾ ಮುಂಗಾನಾಥ್‌ ಗೆ ಭೇಟಿ ನೀಡಿದ ನಂತರ ಮೆಹ್ನಾ ಖೇರಾಕ್ಕೆ ಮರಳುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಿರ್ಸಾ ಸಿವಿಲ್ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಗಾಯಾಳುಗಳು ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಬ್ ಇನ್ಸ್‌ ಪೆಕ್ಟರ್ ಕಿಶೋರಿ ಲಾಲ್ ತಿಳಿಸಿದ್ದಾರೆ.

ಅಪಘಾತದ ಬಗ್ಗೆ ಮಾಹಿತಿ ಪಡೆದ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿದ್ದು, ತನಿಖೆ ಆರಂಭಿಸಿದೆ. ಮೆಹನಖೇಡ ಗ್ರಾಮದ ಮಾಜಿ ಸರಪಂಚ್ ಸುಭಾಷ್ ಮೆಹ್ತಾ ಮಾತನಾಡಿ, ‘ಗ್ರಾಮದ ಕೆಲವರು ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮ ಮನೆಗೆ ಮರಳುತ್ತಿದ್ದಾಗ ವಾಹನ ನಿಯಂತ್ರಣ ತಪ್ಪಿ ಮಾರ್ಗಮಧ್ಯೆ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular