ನವದೆಹಲಿ: ಶುಕ್ರವಾರ ದೆಹಲಿಯ ನಿಜಾಮುದ್ದೀನ್ ಪ್ರದೇಶದ ಹುಮಾಯೂನ್ ಸಮಾಧಿ ಸಂಕೀರ್ಣದೊಳಗೆ ಗೋಡೆಯ ಒಂದು ಭಾಗ ಕುಸಿದು ಮೂವರು ಮಹಿಳೆಯರು ಮತ್ತು ಇಬ್ಬರು ಪುರುಷರು ಸೇರಿದಂತೆ ಐದು ಜನರು ಸಾವನ್ನಪ್ಪಿದ್ದಾರೆ. ಆವರಣದಲ್ಲಿರುವ ದರ್ಗಾ ಫತೇಹ್ ಶಾದಲ್ಲಿ ಈ ಘಟನೆ ಸಂಭವಿಸಿದ್ದು, ಏಳು ಜನರು ಇನ್ನೂ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ಇದೆ.
ಸ್ಥಳದಿಂದ 11 ಜನರನ್ನು ರಕ್ಷಿಸಲಾಗಿದೆ ಮತ್ತು ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಬಗ್ಗೆ ಕರೆ ಬಂದ ನಂತರ ದೆಹಲಿ ಅಗ್ನಿಶಾಮಕ ಸೇವೆ ಮತ್ತು ಇತರ ತುರ್ತು ತಂಡಗಳು ಸ್ಥಳಕ್ಕೆ ಧಾವಿಸಿವೆ, ನಂತರ ತಕ್ಷಣವೇ ರಕ್ಷಣಾ ಕಾರ್ಯಾಚರಣೆಗಳನ್ನು ಪ್ರಾರಂಭಿಸಲಾಯಿತು.
ಯುನೆಸ್ಕೋ ವಿಶ್ವ ಪರಂಪರೆಯ ತಾಣ ಮತ್ತು ಪ್ರಮುಖ ಪ್ರವಾಸಿ ತಾಣವಾದ ಹುಮಾಯೂನ್ ಸಮಾಧಿ ಸಂಕೀರ್ಣವು 16 ನೇ ಶತಮಾನದಲ್ಲಿ ನಿರ್ಮಾಣವಾಗಿದೆ. ವರ್ಷವಿಡೀ ಹೆಚ್ಚಿನ ಸಂಖ್ಯೆಯ ಜನ ವೀಕ್ಷಣೆಗೆ ಬರುತ್ತಾರೆ.