HomeLatest NewsBREAKING: ಟ್ರಕ್‌ ಗೆ ಕಾರ್ ಡಿಕ್ಕಿಯಾಗಿ ಮೂವರು ಮಹಿಳೆಯರು ಸೇರಿ 5 ಜನ ಸಾವು, ಐವರಿಗೆ...

BREAKING: ಟ್ರಕ್‌ ಗೆ ಕಾರ್ ಡಿಕ್ಕಿಯಾಗಿ ಮೂವರು ಮಹಿಳೆಯರು ಸೇರಿ 5 ಜನ ಸಾವು, ಐವರಿಗೆ ಗಾಯ

ಕವರ್ಧಾ: ಛತ್ತೀಸ್‌ಗಢದ ಕಬೀರ್ಧಾಮ್ ಜಿಲ್ಲೆಯಲ್ಲಿ ಎಸ್‌ಯುವಿ ಟ್ರಕ್‌ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಮತ್ತು ಅಪ್ರಾಪ್ತ ಬಾಲಕಿ ಸೇರಿದಂತೆ ಐದು ಜನರು ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಐದು ಜನರು ಗಾಯಗೊಂಡಿದ್ದಾರೆ, ಅವರಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರು ಪಶ್ಚಿಮ ಬಂಗಾಳ ಮೂಲದವರಾಗಿದ್ದು, ನೆರೆಯ ಮಧ್ಯಪ್ರದೇಶದ ಕನ್ಹಾ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಿ ಕೋಲ್ಕತ್ತಾಗೆ ರೈಲು ಹತ್ತಲು ಬಿಲಾಸ್‌ ಪುರಕ್ಕೆ ಹಿಂತಿರುಗುತ್ತಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿಲ್ಪಿ ಪೊಲೀಸ್ ಠಾಣೆ ವ್ಯಾಪ್ತಿಯ ಅಕಲ್‌ಘರಿಯಾ ಗ್ರಾಮದ ಬಳಿ ಬೊಲೆರೊ ಎಂಬ ಎಸ್‌ಯುವಿ ಟ್ರಕ್‌ ಗೆ ಡಿಕ್ಕಿ ಹೊಡೆದಿದ್ದು, ಚಾಲಕ ಸೇರಿದಂತೆ 5 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಐದು ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಇಬ್ಬರು ಹುಡುಗಿಯರನ್ನು ಕವರ್ಧಾದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಾಯಗೊಂಡ ವ್ಯಕ್ತಿಯನ್ನು ಬೋಡ್ಲಾ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರು ವ್ಯಕ್ತಿಗಳನ್ನು ರಾಯ್‌ಪುರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular