BREAKING NEWS: ದುಷ್ಕರ್ಮಿಗಳಿಂದ ರೈಲಿಗೆ ಬೆಂಕಿ; ಐವರ ಸಜೀವದಹನ; ಬಾಂಗ್ಲಾದಲ್ಲಿ ಚುನಾವಣೆ ಪೂರ್ವ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆ ಪೂರ್ವ ಹಿಂಸಾಚಾರ ನಡೆದಿದೆ. ಬೆನಾಪೋಲ್ ಎಕ್ಸ್ಪ್ರೆಸ್ ರೈಲಿಗೆ ಬೆಂಕಿ ಹಚ್ಚಲಾಗಿದ್ದು, ಐವರು ಸಜೀವ ದಹನವಾಗಿದ್ದಾರೆ.

ಸೈದಾಬಾದ್ ಗೋಪಿಬಾತ್ ಪ್ರದೇಶದಲ್ಲಿ ರೈಲಿಗೆ ಬೆಂಕಿ ಹಚ್ಚಲಾಗಿದೆ. ಸೈದಾಬಾದ್ ನಿಂದ ಡಾಕಾಗೆ ತೆರಳುತ್ತಿದ್ದ ಎಕ್ಸ್ಪ್ರೆಸ್ ರೈಲಿಗೆ ದುಷ್ಕರ್ಮಿಗಳ ಗುಂಪು ಬೆಂಕಿ ಹಚ್ಚಿದೆ.

ಶುಕ್ರವಾರ ರಾತ್ರಿ ಬಾಂಗ್ಲಾದೇಶದ ಪ್ಯಾಸೆಂಜರ್ ರೈಲಿಗೆ ಬೆಂಕಿ ಹಚ್ಚಿದ ನಂತರ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ.

ರಾಜಧಾನಿ ಢಾಕಾದ ಗೋಪಿಬಾಗ್ ಪ್ರದೇಶದಲ್ಲಿ ಬೆನಾಪೋಲ್ ಎಕ್ಸ್‌ಪ್ರೆಸ್‌ನಲ್ಲಿ ಈ ಘಟನೆ ನಡೆದಿದೆ. ಪ್ರತಿಪಕ್ಷಗಳ ಬಹಿಷ್ಕಾರದಿಂದಾಗಿ ಅಶಾಂತಿಯಿಂದ ಮುಳುಗಿರುವ ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಗೆ ಹೋಗುವ ಎರಡು ದಿನಗಳ ಮೊದಲು ಘಟನೆ ನಡೆದಿದೆ.

ಗೋಪಿಬಾಗ್ ಪ್ರದೇಶದಲ್ಲಿ ರಾತ್ರಿ 9.00 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ರಾತ್ರಿ 10.20ರ ವೇಳೆಗೆ ಬೆಂಕಿಯನ್ನು ಹತೋಟಿಗೆ ತರಲಾಯಿತು. ರೈಲಿನಲ್ಲಿದ್ದ ಅನೇಕ ಪ್ರಯಾಣಿಕರು ಭಾರತೀಯ ಪ್ರಜೆಗಳಾಗಿದ್ದಾರೆ.

ಐದು ಕಂಪಾರ್ಟ್‌ಮೆಂಟ್‌ಗಳಿಗೆ ಬೆಂಕಿ ಹಚ್ಚಿದ ಪ್ರಕರಣ ಇದಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಢಾಕಾಗೆ ಹೋಗುವ ರೈಲಿನ ಕನಿಷ್ಠ ನಾಲ್ಕು ಕಂಪಾರ್ಟ್‌ಮೆಂಟ್‌ಗಳಿಗೆ ಬೆಂಕಿ ವ್ಯಾಪಿಸಿದೆ.

ಸಾವು-ನೋವು ಮತ್ತು ಹಾನಿಯನ್ನು ನಿರ್ಧರಿಸಲು ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಂಪಾರ್ಟ್‌ಮೆಂಟ್‌ಗಳಲ್ಲಿ ಇನ್ನೂ ಹಲವರು ಸಿಲುಕಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.

ರೈಲು ಢಾಕಾವನ್ನು ಬಾಂಗ್ಲಾದೇಶದ ಪ್ರಮುಖ ಭೂ ಬಂದರು ಬೆನಾಪೋಲ್ಗೆ ಸಂಪರ್ಕಿಸುತ್ತದೆ.

ಬಾಂಗ್ಲಾದೇಶದಲ್ಲಿ ಭಾನುವಾರ ನಡೆಯಲಿರುವ ನಿರ್ಣಾಯಕ ಸಂಸತ್ತಿನ ಚುನಾವಣೆಗೆ ಮುನ್ನ ಹಿಂಸಾಚಾರ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read