SHOCKING: ಇಟ್ಟಿಗೆ ಗೂಡಿನಲ್ಲಿ ಮಲಗಿದ್ದ ಐವರು ಕಾರ್ಮಿಕರು ಉಸಿರುಗಟ್ಟಿ ಸಾವು

ಇಟ್ಟಿಗೆ ತಯಾರಿಕೆ ಭಟ್ಟಿಯಲ್ಲಿ ಕೆಲಸ ಮಾಡುತ್ತಿದ್ದ ಐವರು ಕಾರ್ಮಿಕರು ಗೂಡಿನಲ್ಲಿ ಮಲಗಿರುವಾಗ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಚತ್ತೀಸ್ಗಡದಲ್ಲಿ ನಡೆದಿದೆ.

ಮಹಾಸಮುಂದ್ ಜಿಲ್ಲೆಯಲ್ಲಿ ಈ ಇಟ್ಟಿಗೆ ತಯಾರಿಕಾ ಘಟಕವನ್ನು ಅಕ್ರಮವಾಗಿ ನಡೆಸಲಾಗುತ್ತಿತ್ತು ಎಂದು ಹೇಳಲಾಗಿದ್ದು, ಬೆಂಕಿ ಹಾಕಿದ್ದ ವೇಳೆ ಆವರಿಸಿದ ಹೊಗೆ ಮಲಗಿದ್ದ ಕಾರ್ಮಿಕರ ಸಾವಿಗೆ ಕಾರಣವಾಗಿದೆ.

ಸಾವನ್ನಪ್ಪಿದ ಐದು ಮಂದಿ ಮಹಾಸಮಂದ್ ಜಿಲ್ಲೆಯ ಗಾದಪುಲ್ಜಾರ ಗ್ರಾಮದವರಿಂದ ಹೇಳಲಾಗಿದ್ದು, ತೀವ್ರವಾಗಿ ಅಸ್ವಸ್ಥಗೊಂಡ ಮತ್ತೊಬ್ಬನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read