HomeLatest Newsಅಗ್ನಿ ಅವಘಡದಲ್ಲಿ 5 ಮಂದಿ ಸಜೀವದಹನ ಕೇಸ್: ಕಟ್ಟಡ ಮಾಲೀಕರ ವಿರುದ್ಧ ಎಫ್ಐಆರ್ ದಾಖಲು

ಅಗ್ನಿ ಅವಘಡದಲ್ಲಿ 5 ಮಂದಿ ಸಜೀವದಹನ ಕೇಸ್: ಕಟ್ಟಡ ಮಾಲೀಕರ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಬೆಂಗಳೂರಿನ ನಗರ್ತಪೇಟೆಯಲ್ಲಿ ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡ ಮಾಲೀಕರಾದ ಬಾಲಕೃಷ್ಣಯ್ಯ ಶೆಟ್ಟಿ, ಸಂದೀಪ್ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮೃತ ಮದನ್ ಸಹೋದರ ಗೋಪಾಲ್ ಸಿಂಗ್ ಅವರ ದೂರಿನ ಮೇರೆಗೆ ಕೇಸು ದಾಖಲಿಸಲಾಗಿದೆ. ಸುರಕ್ಷತೆ ಕ್ರಮ ಕೈಗೊಳ್ಳದೆ ಅವೈಜ್ಞಾನಿಕವಾಗಿ ಕಟ್ಟಡ ನಿರ್ಮಾಣ, ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ಆರೋಪದಡಿ ಕೇಸ್ ದಾಖಲಾಗಿದೆ.

ಐವರ ಸಾವಿಗೆ ಪರೋಕ್ಷವಾಗಿ ಕಟ್ಟಡ ಮಾಲೀಕರೇ ಕಾರಣವೆಂದು ದೂರು ದಾಖಲಿಸಲಾಗಿದೆ. ಮದನ್ ಕುಮಾರ್ ಪುರೋಹಿತ್(36) ಸಂಗೀತಾ ಕನ್ವರ್(32) ಹಾಗೂ ಸುರೇಶ್ ಕುಮಾರ್(26), ಮಿತೇಶ್(8), ವಿಹಾನ್(5) ಸಜೀವ ದಹನವಾಗಿದ್ದರು. ಬೆಂಗಳೂರು ನಗರದ ನಗರ್ತಪೇಟೆಯಲ್ಲಿ ಅಗ್ನಿ ಅವಘಡ ಸಂಭವಿಸಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular