HomeKarnatakaಪಾಳು ಬಿದ್ದ ಮನೆಯಲ್ಲಿ 5 ಅಸ್ಥಿಪಂಜರ ಪತ್ತೆ

ಪಾಳು ಬಿದ್ದ ಮನೆಯಲ್ಲಿ 5 ಅಸ್ಥಿಪಂಜರ ಪತ್ತೆ

ಚಿತ್ರದುರ್ಗ: ಪಾಳು ಬಿದ್ದ ಮನೆಯಲ್ಲಿ 5 ಅಸ್ಥಿಪಂಜರಗಳು ಪತ್ತೆಯಾಗಿವೆ. ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್ ಸಮೀಪದ ಜೈಲ್ ರಸ್ತೆಯಲ್ಲಿ ಇರುವ ಮನೆಯಲ್ಲಿ ಅಸ್ತಿಪಂಜರಗಳು ಪತ್ತೆಯಾಗಿವೆ.

ಲೋಕೋಪಯೋಗಿ ಇಲಾಖೆ ನಿವೃತ್ತ ಇಂಜಿನಿಯರ್ ಜಗನ್ನಾಥ ರೆಡ್ಡಿ ಮತ್ತು ಕುಟುಂಬ ವಾಸವಾಗಿದ್ದರು. ಜಗನ್ನಾಥ ರೆಡ್ಡಿ, ಅವರ ಪತ್ನಿ, ಪುತ್ರಿ, ಪುತ್ರರು ವಾಸವಾಗಿದ್ದರು. ಸ್ಥಳೀಯರೊಬ್ಬರು ನೀಡಿದ ಮಾಹಿತಿ ಆಧರಿಸಿ ಪಾಳು ಬಿದ್ದ ಮನೆಯಲ್ಲಿ ಪರಿಶೀಲನೆ ನಡೆಸಿದಾಗ 5 ಅಸ್ಥಿಪಂಜರಗಳು ಪತ್ತೆಯಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವರ್ಷಗಳಿಂದ ಈ ಮನೆ ಪಾಳು ಬಿದ್ದಿತ್ತು ಎನ್ನಲಾಗಿದೆ. ಕುಟುಂಬದವರು ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿರಬಹುದು ಇಲ್ಲವೇ ಕೊಲೆಯಾಗಿರಬಹುದೆಂದು ಹೇಳಲಾಗಿದೆ. ಡಿವೈಎಸ್ಪಿ ಅನಿಲ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular