BIG NEWS: ಪಂಚರಾಜ್ಯ ಚುನಾವಣೆ: ’ಕೈ’ ಹೈಕಮಾಂಡ್ ನಿಂದ 1000 ಕೋಟಿ ಟಾರ್ಗೆಟ್; ಯಾವ ರಾಜ್ಯಕ್ಕೆ ಎಷ್ಟು? ಕಾಂಗ್ರೆಸ್ ವಿರುದ್ಧ ಬಿಜೆಪಿ ಗಂಭೀರ ಆರೋಪ

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಐಟಿ ದಾಳಿಯಲ್ಲಿ ಕೋಟಿ ಕೋಟಿ ಹಣ ಪತ್ತೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಬಿಜೆಪಿ, ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಹಣ ಸಂಗ್ರಹಕ್ಕೆ ಮುಂದಾಗಿದೆ ಎಂದು ಆರೋಪಿಸಿದೆ.

ಪಂಚರಾಜ್ಯಗಳ ಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಟಾರ್ಗೆಟ್ ನೀಡಿದೆ ಮೊದಲ ಹಂತದ 1000 ಕೋಟಿ ಟಾರ್ಗೆಟ್ ಯಾವ ರಾಜ್ಯಕ್ಕೆ ಎಷ್ಟು ಎಂಬುದನ್ನು ಬಿಜೆಪಿ ಟ್ವೀಟ್ ಮೂಲಕ ಟಾಂಗ್ ನೀಡಿದೆ.

ತೆಲಂಗಾಣ ಕಾಂಗ್ರೆಸ್ ಗೆ 100 ಕೋಟಿ, ಛತ್ತೀಸ್ ಗಢ ಹಾಗೂ ರಾಜಸ್ಥಾನ ಕಾಂಗ್ರೆಸ್ ಗೆ ತಲಾ 200 ಕೋಟಿ, ಮಧ್ಯಪ್ರದೇಶ ಕಾಂಗ್ರೆಸ್ ಗೆ 200 ಕೋಟಿ, ಮಿಜೋರಾಂ ಕಾಂಗ್ರೆಸ್ ಗೆ 100 ಕೋಟಿ ಟಾರ್ಗೆಟ್ ನೀಡಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ಕಮಿಷನ್, ಕಲೆಕ್ಷನ್ ಮೂಲಕ ಸಾವಿರ ಕೋಟಿ ಟಾರ್ಗೆಟ್ ಮಾಡಿ ಸಂಗ್ರಹಿಸುತ್ತಿರುವ ಕಾಂಗ್ರೆಸ್ ಹಣ ಹಂಚುವ ಮುನ್ನವೇ ಸಿಕ್ಕಿಬಿದ್ದಿದೆ ಎಂದು ವಾಗ್ದಾಳಿ ನಡೆಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read