HomeIndiaಪಂಚ ರಾಜ್ಯಗಳ ಚುನಾವಣಾ ಮತ ಎಣಿಕೆಗೆ ಕೌಂಟ್ ಡೌನ್ ಆರಂಭ: ನಾಳೆ ಫಲಿತಾಂಶ ಪ್ರಕಟ

ಪಂಚ ರಾಜ್ಯಗಳ ಚುನಾವಣಾ ಮತ ಎಣಿಕೆಗೆ ಕೌಂಟ್ ಡೌನ್ ಆರಂಭ: ನಾಳೆ ಫಲಿತಾಂಶ ಪ್ರಕಟ

ನವದೆಹಲಿ: ಇಡೀ ದೇಶವೇ ಕಾತರದಿಂದ ಕಾಯುತ್ತಿರುವ ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಕ್ಕೆ ಕ್ಷಣಗಣನೆ ಆರಂಭವಾಗಿದೆ, ನಾಳೆ ಮೇ ೪ರಂದು ಐದು ರಾಅಜ್ಯಗಳ ಚುನಾವಣಾ ಫಲಿತಾಂಶ ಹೊರ ಬೀಳಲಿದೆ.

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯ ವಿಧಾನಸಭಾ ಚುನಾವಣೆಗಳ ಫಲಿತಾಂಶಗಳನ್ನು ಚುನಾವಣಾ ಆಯೋಗ ಮೇ 4 ರಂದು ಘೋಷಿಸಲಿದೆ. ನಾಳೆ ಸಂಜೆಯ ವೇಳೆಗೆ ಫಲಿತಾಂಶ ಪ್ರಕಟಗೊಳ್ಳುವ ನಿರೀಕ್ಷೆಯಿದೆ. ಇದೇ ವೇಳೆ ನಾಳೆ ಕರ್ನಾಟಕದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಕೂಡ ಪ್ರಕಟಗೊಳ್ಳಲಿದೆ.

ಪಂಚರಾಜ್ಯಗಳಲ್ಲಿ ಮೊದಲು ಅಂಚೆ ಮತಪತ್ರಗಳನ್ನು ಎಣಿಕೆ ಮಾಡಿ ನಂತರ ಇವಿಎಂಗಳಲ್ಲಿ ದಾಖಲಾಗಿರುವ ಮತಗಳನ್ನು ಎಣಿಕೆ ಮಾಡುವ ಪ್ರಕ್ರಿಯೆ ನಡೆಯುತ್ತದೆ. ಎಲ್ಲಾ ಮತ ಎಣಿಕೆ ಕೇಂದ್ರಗಳಲ್ಲಿ ಬಹುಹಂತದ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಳೆ ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಮಧ್ಯಾಹ್ನದ ವೇಳೆಗೆ ಬಹುತೇಕ ಚಿತ್ರಣ ಸ್ಪಷ್ಟವಾಗಲಿದೆ.

ಈ ಬಾರಿಯ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ ಫಾಲ್ಟಾ ಕ್ಷೇತ್ರವು ವಿಶೇಷ ಗಮನ ಸೆಳೆದಿದೆ. ಚುನಾವಣಾ ಅಕ್ರಮಗಳ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಫಾಲ್ಟಾ ಕ್ಷೇತ್ರದ ಎಲ್ಲಾ 285 ಬೂತ್‌ಗಳಲ್ಲಿ ಮೇ 21 ರಂದು ಹೊಸದಾಗಿ ಮತದಾನ ನಡೆಸಲು ಆಯೋಗ ಆದೇಶಿಸಿದೆ. ಹಿಂದಿನ ಸುತ್ತಿನ ಮತದಾನದ ಸಮಯದಲ್ಲಿ ನಡೆದ ಚುನಾವಣಾ ಅಪರಾಧಗಳು ಮತ್ತು ಪ್ರಜಾಪ್ರಭುತ್ವ ಪ್ರಕ್ರಿಯೆಯ ಬುಡಮೇಲು ಮಾಡುವಿಕೆಯ ವರದಿಗಳಿಂದಾಗಿ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಈ ಕ್ಷೇತ್ರದ ಮತ ಎಣಿಕೆ ಮಾತ್ರ ಮೇ 24 ರಂದು ನಡೆಯಲಿದೆ. ಉಳಿದ ಎಲ್ಲಾ ಕ್ಷೇತ್ರಗಳಿಗೂ ನಾಳೆ ಫಲಿತಾಂಶ ಪ್ರಕಟವಾಗಲಿದೆ.

ಐದು ರಾಜ್ಯಗಳಲ್ಲಿ ಹರಡಿರುವ 824 ಕ್ಷೇತ್ರಗಳ ಈ ಚುನಾವಣಾ ಫಲಿತಾಂಶವು ಪ್ರಜಾಪ್ರಭುತ್ವದ ದೊಡ್ಡ ಹಬ್ಬದ ತೀರ್ಪಾಗಲಿದ್ದು, ಫಲಿತಾಂಶವು ದೇಶದ ರಾಜಕೀಯ ಭೂಪಟದಲ್ಲಿ ಹೊಸ ದಾಖಲೆಗಳನ್ನು ಬರೆಯುವ ನಿರೀಕ್ಷೆಯಿದೆ.

ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಟಿಎಂಸಿ ಹಾಗೂ ಬಿಜೆಪಿ ನಡುವೆ ಜಿದ್ದಾಜಿದ್ದಿನ ವೇದಿಕೆಯಾಗಿದ್ದು, ಫಲಿತಾಂಶ ತೀವ್ರ ಕುತೂಹಲ ಮೂಡಿಸಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಮೂರು ಬಾರಿ ಮುಖ್ಯಮಂತ್ರಿಯಾಗಿ ಪಾರುಮತ್ಯ ಮೆರೆದಿದ್ದು, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಚುನಾವಣೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದು, ಫಲಿತಾಂಶ ಇಡೀ ದೇಶದ ಗಮನ ಸೆಳೆದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular