ಪಂಚರಾಜ್ಯಗಳ ಚುನಾವಣೆ: ಮತಗಟ್ಟೆ ಸಮೀಕ್ಷೆ ಯಾವಾಗ? ಎಲ್ಲಿ ವೀಕ್ಷಿಸಬಹುದು ? ಇಲ್ಲಿದೆ ಮಾಹಿತಿ

ನವದೆಹಲಿ: ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತು ಮತಗಟ್ಟೆಗಳ ಸಮೀಕ್ಷೆಗೆ ಕ್ಷಣಗಣನೆ ಆರಂಭವಾಗಿದೆ. ಸಂಜೆ 6 ಗಂಟೆಯಿಂದ ಚುನಾವಣೋತ್ತರ ಸಮೀಕ್ಷೆ ಹೊರ ಬೀಳಲಿವೆ.

ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಢ, ಮಿಜೋರಾಂ ನಲ್ಲಿ ಈಗಾಗಲೇ ಚುನಾವಣೆ ಮುಗಿದಿದ್ದು, ತೆಲಂಗಾಣದಲ್ಲಿ ಮತದಾನ ನಡೆಯುತ್ತಿದ್ದು, ಕೆಲವೇ ಹೊತ್ತಲ್ಲಿ ಮತದಾನ ಮುಕ್ತಾಯವಾಗಲಿದೆ. ಐದು ರಾಜ್ಯಗಳ ಚುನಾವಣಾ ಫಲಿತಾಂಶ ಡಿಸೆಂಬರ್ 3ರಂದು ಪ್ರಕಟವಾಗಲಿದೆ. ಈ ಹಿನ್ನೆಲೆಯಲ್ಲಿ ಮತದಾರರ ಆಶೋತ್ತರಗಳ ಬಗ್ಗೆ ವಿವಿಧ ಸಂಸ್ಥೆಗಳು ನಡೆಸಿರುವ ಮತಗಟ್ಟೆಗಳ ಸಮೀಕ್ಷೆ ಇಂದು ಹೊರಬೀಳಲಿದೆ.

ನವೆಂಬರ್ 7 ಹಾಗೂ 17ರಂದು ಚತ್ತೀಸ್ ಗಢದಲ್ಲಿ, ನ.17ರಂದು ಮಧ್ಯಪ್ರದೇಶ, ನ.23ರಂದು ರಾಜಸ್ಥಾನದಲ್ಲಿ ಮತದಾನ ನಡೆದಿತ್ತು. ಇಂದು ತೆಲಂಗಾಣದಲ್ಲಿ ಮತದಾನ ನಡೆಯುತ್ತಿದೆ.

ರಾಜಸ್ಥಾನ ಹಾಗೂ ಛತ್ತೀಸ್ ಗಢದಲ್ಲಿ ಕಾಂಗ್ರೆಸ್ ಅಧಿಕಾರ ಉಳಿಸಿಕೊಳ್ಳಲು ಯತ್ನಿಸಿದ್ದರೆ ಮಧ್ಯಪ್ರದೇಶದಲ್ಲಿ ಬಿಜೆಪಿ ಮತ್ತೊಂದು ಅವಧಿಗೆ ಅಧಿಕಾರಕ್ಕೆ ಬರಲು ಯತ್ನಿಸಿದೆ. ಮಿಜೋರಾಮ್ ನಲ್ಲಿ ಆಡಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್, ಕಾಂಗ್ರೆಸ್ ಹಾಗೂ ಝೀರಾಮ್ ಪೀಪಲ್ಸ್ ಮೂಮೆಂಟ್ ಪಕ್ಷಗಳು ಸವಾಲು ಎದುರಿಸುತ್ತಿವೆ. ಇನ್ನು ತೆಲಂಗಾಣದಲ್ಲಿ ಕೆ.ಚಂದ್ರಶೇಖರ್ ರಾವ್ ಅವರ ಭಾರತ್ ರಾಷ್ಟ್ರ ಸಮಿತಿ ಸರ್ಕಾರವನ್ನು ಪದಚ್ಯುತಗೊಳಿಸಲು ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳು ಹಣಾಹಣಿ ನಡೆಸಿವೆ.

ಯಾವ ರಾಜ್ಯಗಳಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ? ಎಂಬ ಬಗ್ಗೆ ವಿವಿಧ ಸುದ್ದಿಸಂಸ್ಥೆಗಳು, ಏಜೆನ್ಸಿಗಳು ಮತಗಟ್ಟೆ ಸಮೀಕ್ಷೆ ನಡೆಸಿದ್ದು ಇಂದು ಸಂಜೆ 6 ಗಂಟೆಗೆ ಸುದ್ದಿವಾಹಿನಿಗಳಲ್ಲಿ ಎಕ್ಸಿಟ್ ಪೋಲ್ ಪ್ರಸಾರವಾಗಲಿದೆ.

2023ರ ಪಂಚರಾಜ್ಯಗಳ ಚುನಾವಣೆ ಫಲಿತಾಂಶಗಳ ಮತಗಟ್ಟೆ ಸಮೀಕ್ಷೆ ಟಿವಿ 9, ಎಬಿಪಿ ನೆಟ್ ವರ್ಕ್, ಟೈಮ್ಸ್ ನೌ, ಇಂಡಿಯಾ ಟುಡೇ, ಆಜ್ ತಕ್, ಝೀ ನ್ಯೂಸ್, ಟಿವಿ9 ಭಾರತ್ ವರ್ಷ ಮೊದಲಾದ ಚಾನಲ್ ಗಳಲ್ಲಿ ವೀಕ್ಷಿಸಬಹುದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read