ತಿರುವನಂತಪುರಂ: ಕೇರಳಂ ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಹೊರ ಬೀಳುತ್ತಿದ್ದು, ದೇವರನಾಡು ಕೇರಳಂ ನಲ್ಲಿ ಭಾರತೀಯ ಜನತಾ ಪಾರ್ಟಿ ಇದೇ ಮೊದಲ ಬಾರಿ ಖಾತೆ ತೆರೆದಿದೆ.
ಕೇರಳಂನ ಚಾತನ್ನೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಡಿ.ಗೋಪಕುಮಾರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇದು ಕೇರಳ ವಿಧಾನಸಭಾ ಇತಿಹಾಸದಲ್ಲಿಯೇ ಬಿಜೆಪಿಯ ಎರಡನೇ ಗೆಲುವಾಗಿದೆ.
ಈ ಹಿಂದೆ ನೇಮಂ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಓ.ರಾಜಗೋಪಾಲ್ ಗೆಲುವು ಸಾಧಿಸಿದ್ದರು. ಸದ್ಯ ನೇಮಂ ಕ್ಷೇತ್ರದಲ್ಲಿ ಬಿಜೆಪಿಯ ರಾಜೀವ್ ಚಂದ್ರಶೇಖರ್ ಮುನ್ನಡೆಯಲಿದ್ದಾರೆ. ರಾಜೀವ್ ಚಂದ್ರಶೇಖರ್ ಕೇರಳ ರಾಜ್ಯ ಬಿಜೆಪಿ ಅಧ್ಯಕ್ಷರಾಗಿದ್ದಾರೆ.

