HomeLive NewsELECTION BREAKING: ಪಂಚರಾಜ್ಯಗಳ ಚುನಾವಣಾ ಫಲಿತಾಂಶ: ಯಾವ ರಾಜ್ಯದಲ್ಲಿ ಯಾವ ಪಕ್ಷಕ್ಕೆ ಮುನ್ನಡೆ: ಹೇಗಿದೆ ಸದ್ಯದ...

ELECTION BREAKING: ಪಂಚರಾಜ್ಯಗಳ ಚುನಾವಣಾ ಫಲಿತಾಂಶ: ಯಾವ ರಾಜ್ಯದಲ್ಲಿ ಯಾವ ಪಕ್ಷಕ್ಕೆ ಮುನ್ನಡೆ: ಹೇಗಿದೆ ಸದ್ಯದ ಟ್ರೆಂಡ್

ನವದೆಹಲಿ: ಇಡೀ ದೇಶವೇ ಕುತೂಹಲದಿಂದ ಕಾಯುತ್ತಿರುವ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಇನ್ನೇನು ಕೆಲ ಹೊತ್ತಲ್ಲೇ ಪ್ರಕಟವಾಗಲಿದೆ. ಎಲ್ಲಾ ಐದು ರಾಜ್ಯಗಳಲ್ಲಿಯೂ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದೆ. ಯಾವ ರಾಜ್ಯಗಳಲ್ಲಿ ಯಾಅವ ಪಕ್ಷ ಮುನ್ನಡೆಯಲ್ಲಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ವಿಧಾನಸಭಾ ಚುನಾವಣೆ ಜೊತೆಗೆ ಇಂದು ಕರ್ನಾಟಕದ ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಕೂಡ ಪ್ರಕಟವಾಗುತ್ತಿದೆ. ಐದು ರಾಜ್ಯಗಳ ಮತ ಎಣಿಕೆ ಟ್ರೆಂಡ್ ಸದ್ಯಕ್ಕೆ ಹೇಗಿದೆ ಎಂಬ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ಮಾಹಿತಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ 15 ವರ್ಷಗಳ ಆಳ್ವಿಕೆ ಈ ಬಾರಿ ಅಂತ್ಯವಾಗುವ ಲಕ್ಷಣಗಳು ಕಾಣುತ್ತಿದ್ದು, ಕೇಸರಿ ಅಲೆಗೆ ಟಿಎಂಸಿ ಧೂಳಿಪಟವಾಗುವುದು ನಿಚ್ಚವಾಗಿದೆ. ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಡ ಟಿಎಂಸಿ ಹಿನ್ನಡೆಯಲ್ಲಿದೆ. ಬಿಜೆಪಿ ಬಹುಮತದತ್ತ ಮುನ್ನುಗ್ಗಿದ್ದು, ಮ್ಯಾಜಿಕ್ ನಂಬರ್ ದಾಟಿದೆ.

ಬಂಘಾಳದಲ್ಲಿ ಟಿಎಂಸಿ 112 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಬಿಜೆಪಿ 173 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ.

ತಮಿಳುನಾಡಿನಲ್ಲಿ ಇದೇ ಮೊದಲ ಬಾರಿ ಸ್ಪರ್ಧಿಸಿದ್ದ ನಟ ವಿಜಯ್ ಅವರ ಟಿವಿಕೆ ಪಕ್ಷ ಅಧಿಕಾರದತ್ತ ದಾಪುಗಾಲಿಟ್ಟಿದೆ. 112 ಕ್ಷೇತ್ರಗಳಲ್ಲಿ ಟಿವಿಕೆ ಮುನ್ನಡೆ ಸಾಧಿಸಿದೆ. ಡಿಎಂಕೆ 49 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಎಐಎಡಿಎಂಕೆ 75 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.

ಅಸ್ಸಾಂನ 126 ಸ್ಥಾನಗಳಲ್ಲಿ, ಬಿಜೆಪಿ 95 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 25 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದೆ. ಕೇರಳದಲ್ಲಿ, ಎಡ ಮೈತ್ರಿಕೂಟ 42 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ ಮೈತ್ರಿಕೂಟ ಯುಡಿಎಫ್ 98 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಪುದುಚೇರಿಯಲ್ಲಿ, ಬಿಜೆಪಿ 20 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಮೈತ್ರಿಕೂಟ 7 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular