HomeLatest Newsಪಶ್ಚಿಮ ಬಂಗಾಳದ ಅಸನ್ಸೋಲ್, ಬಂಕುರಾದಲ್ಲಿ ಬಿಜೆಪಿ-ಟಿಎಂಸಿ ಕಾರ್ಯಕರ್ತರ ನಡುವೆ ಸಂಘರ್ಷ

ಪಶ್ಚಿಮ ಬಂಗಾಳದ ಅಸನ್ಸೋಲ್, ಬಂಕುರಾದಲ್ಲಿ ಬಿಜೆಪಿ-ಟಿಎಂಸಿ ಕಾರ್ಯಕರ್ತರ ನಡುವೆ ಸಂಘರ್ಷ

ಕೋಲ್ಕತ್ತಾ: ಪಂಚರಾಜ್ಯಗಳ ಚುಅನವಣಾ ಫಲಿತಾಂಶ ಹೊರ ಬೀಳುತ್ತಿದ್ದು, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಇದೇ ಮೊದಲ ಬಾರಿಗೆ ಅಧಿಕಾರದ ಗದ್ದುಗೆ ಏರುವುದು ಖಚಿತವಾಗಿದೆ. ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ 15 ವರ್ಷಗಳ ಆಳ್ವಿಕೆ ಅಂತ್ಯವಾಗಲಿದೆ.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 194 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಟಿಎಂಸಿ 95ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಈ ನಡುವೆ ಪಶ್ಶಿಮ ಬಂಗಾಅಳದ ಹಲವೆಡೆ ಮತ ಎಣಿಕೆ ಕೇಂದ್ರದ ಬಳಿ ಬಿಜೆಪಿ ಹಾಗೂ ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಸನ್ಸೋಲ್‌ನಲ್ಲಿ ಬಿಜೆಪಿ ಮತ್ತು ಟಿಎಂಸಿ ನಡುವೆ ಘರ್ಷಣೆ ಸಂಭವಿಸಿದೆ. ಎಣಿಕೆ ಕೇಂದ್ರದಿಂದ 200 ಮೀಟರ್ ದೂರದಲ್ಲಿ ಕಾರ್ಯಕರ್ತರ ನಡುವೆ ಪರಸ್ಪರ ವಾಗ್ವಾದ ಮಾತಿನ ಚಾಮಕಿ ನಡೆದಿದ್ದು, ಗಲಾಟೆಯಲ್ಲಿ ಹಲವರು ಗಾಯಗೊಂಡಿದ್ದಾರೆ.

ಪರಿಸ್ಥಿತಿ ಉಲ್ಬಣಗೊಳ್ಳುವುದನ್ನು ಗಮನಿಸಿದ ಸ್ಥಳದಲ್ಲಿ ನಿಯೋಜಿಸಲಾದ ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದ್ದಿದ್ದಾರೆ. ಈ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಇನ್ನು ಬಂಕುರಾದಲ್ಲಿ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಸಂಘರ್ಷ ನಡೆದಿದೆ. ಪೊಲೀಸರು ಮತ್ತು ಇತರ ಭದ್ರತಾ ಪಡೆಗಳು ಕಾರ್ಯಕರ್ತರನ್ನು ಚದುರಿಸಿದ್ದಾರೆ ಎಂದು ತಿಳಿದುಬಂದಿದೆ.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ಬಿಜೆಪಿ 194 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಟಿಎಂಸಿ 95 ಕ್ಷೇತ್ರಗಳಲಿ ಮುನ್ನಡೆ ಕಾಯ್ದುಕೊಂಡಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular