ಕೋಲ್ಕತ್ತಾ: ಇಂದು ಪಂಚ ರಾಜ್ಯಗಳ ಹಾಗೂ ಕರ್ನಾಟಕದ ಎರಡು ಕ್ಷೇತ್ರಳ ಉಪಚುನಾವಣಾ ಫಲಿತಾಂಶ ಪ್ರಕಟವಾಗಲಿದ್ದು, ಮತ ಎಣಿಕೆ ಭರದಿಂದ ಸಾಗಿದೆ.
ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ವಿಧಾನಸಭಾ ಚುನಾವಣೆ, ಕರ್ನಾಟಕದ ದಾವಣಗೆರೆ, ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಇಂದುಪ್ರಕಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮತ ಎಣಿಕೆ ಚುರುಕುಗೊಂಡಿದೆ.
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 101 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಟಿಎಂಸಿ 102 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಡ ಟಿಎಂ ಸಿ ಹಾಗೂ ಬಿಜೆಪಿ ನಡುವೇ ನೇರ ಹಣಾಹಣಿ ಏರ್ಪಟ್ಟಿದೆ.
ತಮಿಳುನಾಡಿನಲ್ಲಿ ಡಿಎಂಕೆ 55 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಅಸ್ಸಾಂನಲ್ಲಿ 62, ಪುದುಚೆರಿಯಲ್ಲಿ 22 ಹಾಗೂ ಕೇರಳದಲ್ಲಿ 6 ಸ್ಥಾನಗಳಲ್ಲಿ ಮುನ್ನಡೆಯಲಿದೆ.
ಅಸ್ಸಾಂನ 126 ಸ್ಥಾನಗಳಿಗೆ, ಕೇರಳದ 140 ಸ್ಥಾನಗಳಿಗೆ ಮತ್ತು ಪುದುಚೇರಿಯ 30 ಸ್ಥಾನಗಳಿಗೆ ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ತಮಿಳುನಾಡಿನ 234 ಸ್ಥಾನಗಳಿಗೆ ಏಪ್ರಿಲ್ 23 ರಂದು ಒಂದೇ ಹಂತದಲ್ಲಿ ಮತದಾನವೂ ನಡೆದಿತ್ತು. ಪಶ್ಚಿಮ ಬಂಗಾಳದ 294 ಸ್ಥಾನಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. ಮೊದಲ ಹಂತದಲ್ಲಿ 16 ಜಿಲ್ಲೆಗಳ 152 ಸ್ಥಾನಗಳಿಗೆ ಮತದಾನ ನಡೆದಿತ್ತು. ಎರಡನೇ ಹಂತದಲ್ಲಿ ಏಪ್ರಿಲ್ 29 ರಂದು 8 ಜಿಲ್ಲೆಗಳ 142 ಸ್ಥಾನಗಳಿಗೆ ಮತದಾನ ನಡೆದಿತ್ತು.

